

ಸಿದ್ದಾಪುರ: ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಸಂದರ್ಭ ಸಿದ್ದಾಪುರದ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ವಾಹನ ಸಹಿತ ಮರಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಕಾವೇರಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಣೆ ಮಾಡುತ್ತಿರುವ ಸಂದರ್ಭದಲ್ಲಿ ಸಿದ್ದಾಪುರ ಪೊಲೀಸರು ದಾಳಿ ನಡೆಸಿ ಮರಳು ಸಾಗಣೆ ಮಾಡುತ್ತಿದ್ದ ವಾಹನ ಸಹಿತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮರಳು ಸಾಗಣೆ ಮಾಡುತ್ತಿದ್ದ ವಾಹನ ಚಾಲಕ ಅನ್ಸರ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ. ದಾಳಿಯ ಸಂದರ್ಭ ಸಿದ್ದಾಪುರ ಕ್ರೈಂ ಠಾಣಾಧಿಕಾರಿ ಶಿವಣ್ಣ ಹಾಗೂ ಸಿಬ್ಬಂದಿ ಹಾಜರಿದ್ದರು.