ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರ ಬಂಧನ

16blrp1
Published on

ಬೇಲೂರು : ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಐವರನ್ನು ಬಂಧಿಸಿರುವ ಬೇಲೂರು ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಬ್ರಾರ್ (24), ಹರ್ಷತ್‌ಖಾನ್ (26) ವಾಸಿಂ (28), ಆನೀಮ್ ಉದ್ದೀನ್ (24), ಸಯ್ಯದ್ ಇಮ್ರಾನ್ (33) ಬಂಧಿತರು.


ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಯಗಚಿ ನದಿ ಸಮೀಪದಲ್ಲಿರುವ ಮಂಜುನಾಥ ಕಲ್ಯಾಣ ಮಂಟಪದ ಆವರಣದಲ್ಲಿ ಶನಿವಾರ ರಾತ್ರಿ ಐದು ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೇಲೂರು ಪೊಲೀಸರು ದಾಳಿ ನಡೆಸಿದ್ದಾರೆ. ಗೋವುಗಳನ್ನು ರಕ್ಷಣೆ ಮಾಡಲಾಗಿದೆ.


ಕಾರ್ಯಾಚರಣೆಯಲ್ಲಿ ಪಿಎಸ್‌ಐ ಶಿವನಗೌಡ ಜಿ.ಪಾಟೀಲ್, ಸಿಬ್ಬಂದಿ ದೇವೇಂದ್ರ, ಚೇತನ್, ನಾಗೇಶ್, ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net