ಅಕ್ರಮವಾಗಿ ನೀರು ಪಡೆಯುವವರ ವಿರುದ್ಧ ಕ್ರಮಕೈಗೊಳ್ಳಿ

28-08-Shiva-5
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೈ ಅಧ್ಯಕ್ಷತೆಯಲ್ಲಿ ಸೋಮವಾರ ನೀರಾವರಿ ಮತ್ತು ರೈತರ ಮುಖಂಡರ ಸಭೆ ಜರುಗಿತು. ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಪ್ರೊಬೇಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಸಹಾಯಕ ಆಯುಕ್ತರಾದ ಅವಿನಾಶ ಶಿಂಧೆ, ಮಹೆಬೂಬಿ, ರೈತ ಮುಖಂಡರಾದ ಚಾಮರಸ ಮಾಲಿಪಾಟೀಲ್, ಶಂಕರಗೌಡ ಹರವಿ ಇದ್ದರು.
Published on

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಿಂದ ಅಕ್ರಮವಾಗಿ ನೀರು ಪಡೆಯುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೂಲಕ ಕಾಲುವೆ ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೈ ಅಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ನೀರಾವರಿ ಇಲಾಖೆ ಅಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲುವೆಯಿಂದ ಅಕ್ರಮವಾಗಿ ನೀರು ಪಡೆಯಲು ಅಳವಡಿಸಿರುವ ಪಂಪ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಬೇಕು. ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ತಿಳಿಸಿದರು.
ಕಾಲುವೆಯ ಎಲ್ಲ ವಿತರಣಾ ಕಾಲುವೆಗಳಲ್ಲಿ ನಿಗದಿತ ಗೇಜ್ ನಿರ್ವಹಣೆ ಮಾಡಬೇಕು. ಸಿರವಾರ ವಿಭಾಗದಲ್ಲಿ ಗೇಜ್ ನಿರ್ವಹಣೆಯಾಗದ ಹಿನ್ನೆಲೆಯಲ್ಲಿ ಕಾಲುವೆ ಕೆಳಭಾಗದ ರೈತರಿಗೆ ಸಮರ್ಪಕ ನೀರು ದೊರೆಯುತ್ತಿಲ್ಲ. ಕೂಡಲೇ ಸಮಸ್ಯೆಯನ್ನು ಸರಿಪಡಿಸಬೇಕು.
ಕಾಲುವೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಅನಕೃತವಾಗಿ ಪಂಪ್‌ಸೆಟ್ ಬಳಸಿ ನೀರು ಪಡೆಯಲಾಗುತ್ತಿದ್ದು, ಪಂಪ್‌ಸೆಟ್‌ಗಳಿಗೆ ಪರವಾನಗಿ ಇಲ್ಲದೆ ಪರಿವರ್ತಕ ಅಳವಡಿಸಲಾಗಿದೆ. ಕೂಡಲೇ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಪಂಪ್‌ಸೆಟ್, ಪರಿವರ್ತಕ ವಶಪಡಿಸಿಕೊಳ್ಳಬೇಕು.
ಕಾಲುವೆಯಲ್ಲಿ ಗೇಜ್ ನಿರ್ವಹಣೆಗಾಗಿ ಟೆಲಿಮೀಟರ್ ಅಳವಡಿಸಲಾಗಿದ್ದು, ಕೆಟ್ಟು ಹೋದ ಟೆಲಿಮೀಟರ್‌ಗಳನ್ನು ಏಳು ದಿನದೊಳಗೆ ದುರಸ್ತಿಗೊಳಿಸಬೇಕು. ಕಾಲುವೆ ಎಡಭಾಗದಲ್ಲಿ ರಸ್ತೆ ನಿರ್ಮಾಣ, ಅಕ್ರಮ ನೀರಾವರಿ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು.
ರೈತರಿಗೆ ಯಾವುದೇ ರೀತಿಯಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕೊನೆಭಾಗಕ್ಕೆ ಸಮರ್ಪಕ ನೀರು ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಕೃಷ್ಣ ಬಾಜಪೈ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಪ್ರೊಬೇಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಸಹಾಯಕ ಆಯುಕ್ತರಾದ ಅವಿನಾಶ ಶಿಂಧೆ, ಮಹೆಬೂಬಿ, ರೈತ ಮುಖಂಡರಾದ ಚಾಮರಸ ಮಾಲಿಪಾಟೀಲ್, ಶಂಕರಗೌಡ ಹರವಿ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net