ಅಕ್ರಮವಾಗಿ ಮದ್ಯ ಮಾರುತ್ತಿದ್ದವನ ಬಂಧನ

Published on

ಕೊಳ್ಳೇಗಾಲ:ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಗ್ರಾಮದ ಗವಿಶೆಟ್ಟಿ(45) ಬಂಧಿತ ಆರೋಪಿ.‌ ಈತ ಗ್ರಾಮದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿದ ಪಿಎಸ್ಐ ಮಂಜುನಾಥ್ ತಂಡ ದಾಳಿನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 90 ಎಂ ಎಲ್ ಸಾಮಾರ್ಥ್ಯದ 12 ಪೌಚ್ ಗಳನ್ನು ವಶಕ್ಕೆ ಪಡೆಯಲಾಗಿದ್ದು. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net