ಅಕ್ರಮವಾಗಿ ರಸಗೊಬ್ಬರ ಸಾಗಾಣೆ ವಿರುದ್ಧ ಕ್ರಮಕ್ಕೆ ಆಗ್ರಹ

Published on

ಚಾಮರಾಜನಗರ: ರಸಗೊಬ್ಬರವನ್ನು ಅಕ್ರಮವಾಗಿ ಹೊರರಾಜ್ಯಕ್ಕೆ ಸಾಗಾಣೆ ಮಾಡುವದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮಗಳಿಗೆ ಸೋಮವಾರ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮಳೆಯಾಗಿರುವುದರಿಂದ ನಾಟಿ ಕಾರ್ಯ ನಡೆಯುತ್ತಿದೆ. ರಸಗೊಬ್ಬರ ಖರೀದಿ ಮಾಡಲು ರೈತರು ಅಂಗಡಿಗಳಿಗೆ ಹೋಗುತ್ತಿದ್ದಾರೆ. ಆದರೆ ರಸಗೊಬ್ಬ ದಾಸ್ತಾನು ಇಲ್ಲವೆಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಗುಂಡ್ಲುಪೇಟೆ ಮಾರ್ಗವಾಗಿ ಕೇರಳಕ್ಕೆ ಅಕ್ರಮಾಗಿ ರಸಗೊಬ್ಬರ ಸಾಗಾಣೆ ಮಾಡಿರುವುದು ಕೃತಕ ಅಭಾವ ಸೃಷ್ಟಿ ಮಾಡುವ ಕೈವಾಡವಾಗಿದೆ. ಇದರ ಹಿಂದೆ ಇರುವ ಕಾಣದ ಕೈಗಳನ್ನು ಪತ್ತೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net