ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಜಪ್ತಿ

04 SIRAGUPPA 01
Published on

ಸಿರಗುಪ್ಪ: ರಾರಾವಿ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 11,730 ರೂ. ಮೌಲ್ಯದ 5.10 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.

ಆಹಾರ ನಿರೀಕ್ಷಕ ಎಂ.ವಿಜಯ್ ಕುಮಾರ್ ಹಾಗೂ ಪಿ.ಎಸ್.ಐ ಪರಶುರಾಮ ನೇತೃತ್ವದಲ್ಲಿ ದಾಳಿ ನಡೆಸಿದ ಸಿಬ್ಬಂದಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮನೆಯ ಮಾಲೀಕ ರಾಮ ವಿರುದ್ಧ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net