ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರು ವಶಕ್ಕೆ

29gkn1-a-
Published on

ಗೋಕರ್ಣ: ಉತ್ತರ ಪ್ರದೇಶದಿಂದ ಕೇರಳದ ಕಾಸರಗೋಡಿಗೆ ಅಕ್ರಮವಾಗಿ ಕಂಟೇನರ್ ಒಂದರಲ್ಲಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ 37 ಮರಿ ಕೋಣಗಳನ್ನು ರಾಷ್ಟ್ರೀಯ ಹೆದ್ದಾರಿ ಹಿರೇಗುತ್ತಿಯ ಚೆಕ್ ಪೋಸ್ಟ್​ನಲ್ಲಿ ಮಂಗಳವಾರ ಬೆಳಗ್ಗೆ ಸ್ಥಳೀಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಾಲಕ ಇರ್ಷಾದ ಅಲ್ಮದೀನ್ ಮಹಮ್ಮದ್ ಮತ್ತು ಇತರ ನಾಲ್ವರ ವಿರುದ್ಧ ಪಿಎಸ್​ಐ ನವೀನ ನಾಯ್ಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net