ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಲಾರಿ ವಶ

28 Dwd 13
Published on

ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿನಗರದ ವಿವಿಧೆಡೆ ದಾಳಿ ನಡೆಸಿರುವ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕಾನೂನು ಸುವ್ಯವಸ್ಥೆ ಪ್ರಭಾರ ಡಿಸಿಪಿಯೂ ಆಗಿರುವ ಪಿ. ಕೃಷ್ಣಕಾಂತ ನೇತೃತ್ವದಲ್ಲಿ ಮಂಗಳವಾರ ತಡರಾತ್ರಿ ಹಾಗೂ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಧಾರವಾಡದ ಹೊಸ ಎಪಿಎಂಸಿಯಲ್ಲಿ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇವೇಳೆ ಹುಬ್ಬಳ್ಳಿ ನವನಗರದ ಎಪಿಎಂಸಿಯ ಗೋದಾಮೊಂದರ ಮೇಲೆ ದಾಳಿ ಮಾಡಲಾಗಿದೆ. ಎರಡೂ ಕಡೆಗಳಲ್ಲಿ ಸುಮಾರು ನೂರಾರು ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಪಿ. ಕೃಷ್ಣಕಾಂತ, ಅವಳಿನಗರದ ಹಲವೆಡೆ ದಾಳಿ ನಡೆಸಲಾಗಿದೆ. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಕಿ ಸಾಗಿಸುತ್ತಿದ್ದ ಲಾರಿಯ ವಿವರ, ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬುದರ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಸಂಪೂರ್ಣ ವಿವರ ಸಂಗ್ರಹಿಸಿ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net