ಅಕ್ಷರದಾಸೋಹ ಸಿಬ್ಬಂದಿಯನ್ನು ಕಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ

AIUTUC
Published on

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಅಕ್ಷರದಾಸೋಹ ಕಾರ್ಮಿಕರ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಅಪೌಷ್ಟಿಕತೆ ನೀಗಿಸಲು ಬಿಸಿಯೂಟ ಯೋಜನೆಯು ಅತ್ಯಂತ ಪರಿಣಾಮಕಾ ರಿಯಾಗಿದ್ದು, ಈ ಯೋಜನೆ ಅನುಷ್ಠಾನಕ್ಕೆ ಕಳೆದ 20 ವರ್ಷಗಳಿಂದ ಬೆನ್ನೆಲುಬಾಗಿರುವ ಮಹಿಳಾ ಕಾರ್ಮಿಕರು, ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಡುಗೆ ಸಿಬ್ಬಂದಿಯನ್ನು ಕಾಯಂಗೊಳಿಸಿ ಮಾಸಿಕ ವೇತನ, ಇಪಿಎಫ್, ಇಎಸ್‌ಐ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಲಾ ಯಿತು.

ಶಾಸನಬದ್ಧ ಸೌಕರ್ಯಗಳಾದ ವಾರದ ರಜೆ, ರಾಷ್ಟ್ರೀಯ ಹಬ್ಬಗಳ ರಜೆ, ಹೆರಿಗೆ ರಜೆಗಳನ್ನು ನೀಡಬೇಕು. ಈ ರಜಾ ದಿನಗಳಲ್ಲಿ ಕೆಲಸ ಮಾಡಿದವರಿಗೆ ದುಪ್ಪಟ್ಟು ವೇತನ ನೀಡಬೇಕು, ಮಾಸಿಕ ವೇತನವನ್ನು ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಕಾರ್ಮಿಕರ ಬ್ಯಾಂಕ್ ಖಾತೆಗೆ ಪಾವತಿಸಬೇಕು, ಸುರಕ್ಷಿತ ನಿವೃತ್ತಿ ಬದುಕು ಖಾತ್ರಿಗೊಳಿಸಲು ನಿವೃತ್ತಿ ವೇತನಕ್ಕೆ ಒಳಪಡಿಸಬೇಕು ಹಾಗೂ 5 ಲಕ್ಷ ರೂ. ಇಡುಗಂಟು ನೀಡಬೇಕು, ಜೀವ ವಿಮೆಗೆ ಒಳಪಡಿಸಿ ಇಲಾಖೆಯಿಂದ ಪ್ರೀಮಿಯಂ ಪಾವತಿಸಬೇಕು ಎಂದು ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಪಿ.ಎಸ್. ಸಂಧ್ಯಾ, ಪದಾಧಿಕಾರಿಗಳಾದ ಮಹದೇವಮ್ಮ, ಕುಮಾರಿ, ರಾಜೇಶ್ವರಿ, ಮಂಜುಳಾ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net