ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಉದ್ಯೋಗಿ ಸಾವು

crime
Published on

ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಉದ್ಯೋಗಿಯೊಬ್ಬರು ಹಾಸ್ಟೆಲ್‌ನ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಮೂಲದ ಪ್ರಾಣೇಶ್(26) ಮೃತರು. ಟೆಕ್ನೀಷಿಯನ್ ಆಗಿದ್ದ ಇವರು ಅಂಗವಿಕಲರಾಗಿದ್ದು, ವಿಜಯಶ್ರೀಪುರದ ವೆಂಕಟೇಶ್ವರ ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ಒಬ್ಬರೇ ಇದ್ದರು. ಸಾಕಷ್ಟು ಸಮಯ ಕಳೆದರೂ ಹೊರಗೆ ಬಾರದಿರುವುದನ್ನು ಗಮನಿಸಿದ ಹಾಸ್ಟೆಲ್‌ನ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದರು.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net