ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

CTD SAMMELANA-----
Published on

ಚಿತ್ರದುರ್ಗ: ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಚಿತ್ರದುರ್ಗದ ಮುರುಘಾಮಠದಲ್ಲಿ ಜ.18 ರಿಂದ 2 ದಿನಗಳ ಕಾಲ ಹಮ್ಮಿಕೊಂಡಿರುವ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬೀದರ್‌ನ ಸಿದ್ಧರಾಮ ಶರಣರು ಬೆಲ್ದಾಳ ಅವರನ್ನು ಮಂಗಳವಾರ ಔಪಚಾರಿಕವಾಗಿ ಆಹ್ವಾನಿಸಲಾಯಿತು.

ಬೆಂಗಳೂರಿನ ಜಯನಗರದಲ್ಲಿರುವ ಸುತ್ತೂರು ಮಠದಲ್ಲಿ ಪರಿಷತ್ ಕಾರ್ಯಕಾರಿ ಸಮಿತಿ ಪ್ರಮುಖರು, ಬೆಲ್ದಾಳ ಅವರನ್ನು ಭೇಟಿಯಾಗಿ, ಅವರಿಗೆ ಶಾಲು ಹೊದಿಸಿ, ಹೂಹಾರ ಹಾಕಿ, ಆಮಂತ್ರಣ ಪತ್ರಿಕೆ, ಸಮ್ಮೇಳನ ಪತ್ರ ಹಾಗೂ ಫಲ ನೀಡಿ ಆಮಂತ್ರಿಸಿದರು. ಅಖಿಲ ಭಾರತ ಶರಣ ಸಾ ಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಡಾ.ಕೆ.ಎಂ. ವೀರೇಶ್, ಖಜಾಂಚಿ ಹಂಪಯ್ಯ, ಚಿಕ್ಕಪ್ಪನಹಳ್ಳಿ ಸೋಮಶೇಖರ್, ಯೋಗಗುರು ವೈದ್ಯ ಚೆನ್ನಬಸವಣ್ಣ, ಸಮ್ಮೇಳನದ ಸ್ವಾಗತ ಸಮಿತಿ ಖಜಾಂಚಿ ಕೆಇಬಿ ಷಣ್ಮುಖಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ಬಿ.ಎಂ. ರುದ್ರೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net