ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಕ್ರಮ

4.npk-1
Published on

ನಾಪೋಕ್ಲು: ಸಾರ್ವಜನಿಕ ಕ್ಷೇತ್ರವನ್ನು ನಾವೇ ಆಯ್ಕೆ ಮಾಡಿಕೊಂಡು ಬಂದಿರುವುದರಿಂದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಯುತ ಸೌಲಭ್ಯ ಹಾಗೂ ಸವಲತ್ತು ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ವಿರಾಜಪೇಟೆ ಶಾಸಕ ಎ.ಎನ್.ಪೊನ್ನಣ್ಣ ಹೇಳಿದರು.

ನಾಪೋಕ್ಲು ಶ್ರೀ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಂದಾಯ ಇಲಾಖೆಯಿಂದ ಹಕ್ಕು ಪತ್ರ ಮತ್ತು ಪಿಂಚಣಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾರ್ವಜನಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು. ಸಮಸ್ಯೆಗಳನ್ನು ಆದ್ಯತೆ ಅನುಸಾರ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ತಹಸೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ಪ್ರತಿ ತಿಂಗಳು 15 ದಿನಗಳಿಗೊಮ್ಮೆ ಹೋಬಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಸರಿಪಡಿಸಿಕೊಡಲಾಗುವುದು ಎಂದು ಹೇಳಿದರು.

ಸಾಮಾಜಿಕ ಭದ್ರತಾ ಯೋಜನೆ ಅಡಿ ಅರ್ಹತಾ ಫಲಾನುಭವಿಗಳಿಗೆ ಆದೇಶ ಪತ್ರ ಮತ್ತು ಸಾಗುವಳಿ ಚೀಟಿ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಶೇಖರ್, ಉಪತಹಸೀಲ್ದಾರ್ ಸುನಿಲ್ ಕುಮಾರ್, ಕಂದಾಯ ಪರಿವೀಕ್ಷಕ (ಐ) ರವಿಕುಮಾರ್, ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಸತೀಶ್, ಉಪ ಅಭಿಯಂತರ ಜವರೇಗೌಡ, ಪಿಡಿಒ ಚೋಟದಕ್ಕಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರಹಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ, ಬೂತ್ ಅಧ್ಯಕ್ಷ ಶಿರಾಜುದ್ದೀನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net