ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

bkt-06-11
ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಜೆಡಿಎಸ್ ಜಿಲ್ಲಾ ಘಟಕದಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಬಾಗಲಕೋಟೆ:ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಗ್ಯಾರಂಟಿ ಯೋಜನೆಗಳು ಸಮರ್ಪಕ ಜಾರಿ ಆಗುತ್ತಿಲ್ಲ, ಮೈಕ್ರೋ -ೆÊನಾನ್ಸ್ ಗಳ ಕಿರುಕುಳದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಆರೋಪಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ಗುರುವಾರ ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ನವನಗರದ ಮಿನಿ ವಿಧಾನಸೌಧ ರಸ್ತೆಯಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಅಲ್ಲಿ ಬಹಿರಂಗ ಸಭೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹನಮಂತ ಮಾವಿನಮರದ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವೇ ಇಲ್ಲವಾಗಿದೆ. ಇದು ವಿಪಕ್ಷಗಳು ಆರೋಪವಲ್ಲ, ಅವರದ್ದೇ ಪಕ್ಷದ ಶಾಸಕರು, ಸಚಿವರು ಹೇಳುತ್ತಿದ್ದಾರೆ. ನೀರಾವರಿ, ಶಿಕ್ಷಣ, ಲೋಕೋಪಯೋಗಿ ಇಲಾಖೆಗಳಲ್ಲಿ ಅನುದಾನವಿಲ್ಲದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಇದೇ ಕಾಂಗ್ರೆಸ್ಸಿಗ್ರು ಶೇ. ೪೦ ಪರ್ಸೆಂಟ್ ಭ್ರಷ್ಟಾಚಾರದ ಸರ್ಕಾರ ಎಂದು ಟೀಕೆ ಮಾಡುತ್ತಿದ್ದರು. ಈಗ ಗುತ್ತಿಗೆದಾರರೇ ಕಾಂಗ್ರೆಸ್ ಸರ್ಕಾರ ಶೇ. ೬೦ ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದಾರೆ. ಸರ್ಕಾರ ನಡೆಸುವವರಿಗೆ ನಾಚಿಕೆ ಇಲ್ಲವಾಗಿದೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದು ಎಂದು ವಾಗ್ದಾಳಿ ನಡೆಸಿದರು.

ಮೈಕ್ರೊ -ÉÊನಾನ್ಸ್ಗಳ ಹಾವಳಿಯಿಂದ ಬಡವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆ ಕುಟುಂಬಗಳಿಗೆ ಪರಿಹಾರ ನೀಡಬೇಕು. ಮತ್ತೊಂದೆಡೆ ರೈತ ವಿರೋಽ ನೀತಿಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ತಡೆಯಲು ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಜನರಿಗೆ ಸಂಕಷ್ಟ ಎದುರಿಸುವಂತಾಗಿದೆ. ಯಾವುದಾದರೂ ಚುನಾವಣೆ ಬಂದಾಗ ಹಣ ಬಿಡುಗಡೆ ಮಾಡುತ್ತದೆ. ಬೇಸಿಗೆ ಆರಂಭದಲ್ಲೆ ವಿದ್ಯುತ್ ಕಂಪನಿಗಳು ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಕಾರಣ ಸರ್ಕಾರದಿಂದ ಅನುದಾನ ಬರುತ್ತಿಲ್ಲ ಎಂದು ಅಽಕಾರಿಗಳು ಹೇಳುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಐದು ತಿಂಗಳಿAದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಅನುದಾನ ಜಮಾ ಮಾಡಿಲ್ಲ. ಯುವನಿಽಯ ಯೋಜನೆ ಲಾಭ ನಿರುದ್ಯೋಗಿಗಳನ್ನು ತಲುಪುತ್ತಿಲ್ಲ. ಶಕ್ತಿ ಯೋಜನೆಗೆ ತಕ್ಕಂತೆ ಬಸ್‌ಗಳ ಸಂಖ್ಯೆ ಹೆಚ್ಚಿಸಿಲ್ಲ. ಇದರಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ, ಸಂಚರಿಸುವುದೇ ದುಸ್ತರವಾಗಿದೆ ಎಂದು ಮನವಿಯಲ್ಲಿ ದೂರಿದ್ದಾರೆ.

ಪ್ರತಿಭಟನೆಯಲ್ಲಿ ಕೃಷ್ಣಾ ಪಾಟೀಲ, ಶಿವು ಗದ್ದಿ, ಚಂದ್ರಕಾAತ ಶೇಖರ, ಎಂ.ಎಸ್. ಹಿರೇಹಾಳ, ನಬಿ ತಹಶೀಲ್ದಾರ್, ರಂಗನಾಥ ಮಳೆಯಪ್ಪಗೋಳ, ಹುಚ್ಚೇಶ ಹದ್ದಣ್ಣವರ, ಮುತ್ತಣ್ಣ ಕಳ್ಳಿಗುಡ್ಡ, ಅನ್ವರಖಾನ್ ಪಠಾಣ, ಗುರುದೇವ ಹಿರೇಮಠ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net