ಅಗ್ನಿವೀರ ಸೇನಾ ನೇಮಕಾತಿಗೆ ನೋಂದಣಿ

Agnipath
Published on

ಬೆಳಗಾವಿ: ಅಗ್ನಿವೀರ ಸೇನಾ ನೇಮಕಾತಿ ಕಚೇರಿ ಬೆಂಗಳೂರು ಹಾಗೂ ಬೆಳಗಾವಿ ವಲಯದಿಂದ ಅಗ್ನಿವೀರ ಭೂಸೇನೆಯಲ್ಲಿ ನೇಮಕಾತಿಗೆ ಆನ್‌ಲೈನ್ ನೋಂದಣಿ ಆರಂಭಗೊಂಡಿದೆ. ಬೆಳಗಾವಿ, ಬೀದರ, ಕಲುಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ನೋಂದಣಿ ಮಾಡಿಸಬಹುದು.

ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್‌ಮನ್ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಗ್ನಿವೀರ, ಟ್ರೇಡ್‌ಮನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಕ್ಲರ್ಕ, ಸ್ಟೋರ್‌ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.

ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ವೀಕ್ಷಿಸಬಹುದು. ಏಪ್ರಿಲ್ 10ರೊಳಗೆ www.joinindianarmy.nic.in ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ನೇಮಕಾತಿ ವಿಭಾಗದ ಕರ್ನಲ್ ಎ.ಕೆ. ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net