ಅಚ್ಚುಕಟ್ಟಾಗಿ ಆಯೋಜಿಸಿ

30 YERRISWAMY 02
Published on

ಬಳ್ಳಾರಿ : ಜಿಲ್ಲಾ ಮಟ್ಟದಲ್ಲಿ ಆಯೋಜಿಸುತ್ತಿರುವ ಬಾಪುಜಿ ಪ್ರಬಂಧ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ನಡೆಸಿ, ಯಶ್ವಸಿಗೊಳಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ನಿದೇಶಿಸಿದರು.
ನಗರದ ಜಿಪಂ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ, ಕಾಲೇಜು ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗುತ್ತಿದೆ. ಜಿಲ್ಲೆಯ ಪ್ರತಿಯೊಂದು ತಾಲೂಕುಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬೇಕು. ಎಲ್ಲ ಖಾಸಗಿ ಮತ್ತು ಸರ್ಕಾರಿ ಪ್ರೌಢಶಾಲೆ, ಕಾಲೇಜು ಹಂತದಲ್ಲಿಯೇ ಸ್ಪರ್ಧೆ ಏರ್ಪಡಿಸಿ, ಸ್ಪರ್ಧೆಯ ಕುರಿತು ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ, ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು. ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 03 ಪ್ರಬಂಧದ ಫಲಿತಾಂಶವನ್ನು ಡಿಡಿಪಿಐ, ಡಿಡಿಪಿಯು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಸೆ. 08 ರೊಳಗೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು.
ಪ್ರೌಢಶಾಲೆ ವಿಭಾಗ, ಪದವಿಪೂರ್ವ ವಿಭಾಗ, ಪದವಿ-ಸ್ನಾತಕೋತ್ತರ ಪದವಿ ವಿಭಾಗಕ್ಕೆ ಪ್ರತ್ಯೇಕ ಬಹುಮಾನಗಳಿರುವುದರಿಂದ, ಪದವಿಪೂರ್ವ ವಿಭಾಗ, ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಸ್ಪರ್ಧೆಯಲ್ಲಿ ಪ್ರಬಂಧಗಳನ್ನು ಅತ್ಯಂತ ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಸಿ, ಅತ್ಯುತ್ತಮ ಪ್ರಬಂಧ ಬರೆದು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಕ್ಕೆ ಆಯ್ಕೆಯಾದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿವರವುಳ್ಳ ಫಲಿತಾಂಶ ಮತ್ತು ಬಹುಮಾನಕ್ಕೆ ಆಯ್ಕೆಯಾದ ಮೂಲ ಪ್ರಬಂಧಗಳ ಪ್ರತಿಗಳನ್ನು, ಇದರ ಜತೆಗೆ ಒಟ್ಟಾರೆ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ತಾಲೂಕುವಾರು ಸಂಖ್ಯಾ ವಿವರವನ್ನು ಕ್ರೋಢೀಕರಿಸಬೇಕು ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net