ಅಜಾತ ನಾಗಲಿಂಗಮಠದ ಜಾತ್ರೆ ರದ್ದು

18nlg_2photo
Published on

ನವಲಗುಂದ: ಕರೊನಾ ವೈರಸ್ ಹಿನ್ನೆಲೆಯಲ್ಲಿ ಜೂ. 25, 26ರಂದು ನಡೆಯಬೇಕಿದ್ದ ನವಲಗುಂದದ ಪವಾಡ ಪುರುಷ ಶ್ರೀ ಜಗದ್ಗುರು ಅಜಾತ ನಾಗಲಿಂಗ ಮಹಾಸ್ವಾಮಿಗಳ 139ನೇ ಆರಾಧನೆ, ಪಲ್ಲಕ್ಕಿ ಮತ್ತು ಮೇಣೆ ಮಹೋತ್ಸವವನ್ನು ರದ್ದುಗೊಳಿಸಲಾಗಿದೆ ಎಂದು ಅಜಾತ ನಾಗಲಿಂಗ ಮಠದ ಆಡಳಿತಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಆದೇಶದನ್ವಯ ಜೂ. 30ರವರೆಗೆ ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಹಾಗೂ ಕರೊನಾ ವೈರಸ್ ಸೋಂಕು ಹರಡದಂತೆ ಭಕ್ತರ ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜಾತ್ರೆ ರದ್ದುಗೊಳಿಸಲಾಗಿದೆ. ಈ ವರ್ಷದ ಜಾತ್ರಾ ಮಹೋತ್ಸವ, ಪಲ್ಲಕ್ಕಿ ಉತ್ಸವ, ಧಾರ್ವಿುಕ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗುವುದಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net