ಅಜಾದ್ ಪಾರ್ಕ್ ಗಣಪತಿ ಪೆಂಡಾಲ್‌ಗೆ ಭೂಮಿಪೂಜೆ

11 ckm 7
ಚಿಕ್ಕಮಗಳೂರಿನ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಆಜಾದ್ ಪಾರ್ಕ್ ಗಣಪತಿ ಪ್ರತಿಷ್ಠಾಪನೆ ಪೆಂಡಾಲ್ ನಿರ್ಮಾಣಕ್ಕೆ ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಭೂಮಿ ಪೂಜೆ ನೆರವೇರಿಸಿದರು. ಮಂಗಳಾ ತಮ್ಮಯ್ಯ, ಪಲ್ಲವಿ ಸಿ.ಟಿ.ರವಿ, ರೂಪಾ ಕುಮಾರ್, ಸಿ.ಎಸ್.ಕುಬೇರ, ಕೇಶವಮೂರ್ತಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶೋತ್ಸವ ನಡೆಸಲು ಪೆಂಡಾಲ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಸರ್ವರಿಗೂ ವಿಘ್ನವಿನಾಯಕ ಒಳಿತನ್ನು ಮಾಡಲಿ ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಶುಭ ಹಾರೈಸಿದರು.

ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಅಜಾದ್ ಪಾರ್ಕ್ ಗಣಪತಿ ಪೆಂಡಾಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು,

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಂಗಳ ತಮ್ಮಯ್ಯ ಮಾತನಾಡಿ, ಈ ವರ್ಷದ ಗಣೇಶ ಚತುರ್ಥಿ ನಗರದ ಎಲ್ಲ ನಾಗರೀಕರಿಗೆ ಹಾಗೂ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಪಲ್ಲವಿ ಸಿ.ಟಿ. ರವಿ ಮಾತನಾಡಿ, ವಿಘ್ನವಿನಾಯಕ ಸರ್ವರಿಗೂ ಸನ್ಮಂಗಳವನ್ನುAಟುಮಾಡಲಿ ಎಂದು ಕೋರಿದರು.

ಗಣಪತಿ ಸೇವಾ ಸಮಿತಿ ಕಾರ್ಯದರ್ಶಿ ಕೇಶವಮೂರ್ತಿ ಮಾತನಾಡಿ, ಆ. ೨೭ರಿಂದ ೨೧ ದಿನಗಳ ಕಾಲ ಶ್ರೀಯವರನ್ನು ಪ್ರತಿಷ್ಠಾಪನೆ ಮಾಡಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಹರಿಕಥೆ, ಭಜನೆ, ಆರ್ಕೆಸ್ಟಾç, ಸುಗಮ ಸಂಗೀತ, ಮ್ಯಾಜಿಕ್ ಶೋ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಗಣೇಶೋತ್ಸವದ ಅಂಗವಾಗಿ ಗಣಹೋಮ, ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಿದ್ದು, ಈ ಕಾರ್ಯಕ್ಕೆ ಇಂದು ಭೂಮಿಪೂಜೆಯನ್ನು ಏರ್ಪಡಿಸಲಾಗಿದೆ. ಇಂದಿನಿAದ ಪೆಂಡಾಲ್ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.

ಪ್ರತಿ ವರ್ಷದಂತೆ ನಗರದ ಬಸವನಹಳ್ಳಿ ರಂಗನಾಥಸ್ವಾಮಿ ದೇವಾಲಯದಿಂದ ಶ್ರೀಯವರನ್ನು ಎಂಜಿ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪೆಂಡಾಲಿಗೆ ತಂದು ಪ್ರತಿಷ್ಠಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಗಣಪತಿ ಸೇವಾ ಸಮಿತಿ ಅಧ್ಯಕ್ಷ ಸಿ.ಎಸ್. ಕುಬೇರ, ಕಾರ್ಯದರ್ಶಿ ಕೇಶವಮೂರ್ತಿ, ಖಜಾಂಚಿ ಮಂಜುನಾಥ್ ಸೇರಿದಂತೆ ೨೧ ಜನ ನಿರ್ದೇಶಕರನ್ನು ಆಯ್ಕೆಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ರೂಪ ಕುಮಾರ, ಗಣಪತಿ ಸೇವಾ ಸಮಿತಿ ಅಧ್ಯಕ್ಷ ಸಿ.ಎಸ್.ಕುಬೇರ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net