ಅಜೂರ ಹಾಗೂ ಅಂಜುಟಗಿಗೆ ಸಿಎಂ ಪದಕ

pixlr_20210323234024977
Published on

ವಿಜಯಪುರ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ 115 ಅಧಿಕಾರಿ ಹಾಗೂ ಸಿಬ್ಬಂದಿಗೆ 2020ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅದರಲ್ಲಿ ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಶರಣಪ್ಪ.ಬಿ. ಅಜೂರ ಹಾಗೂ ತಿಕೋಟ ಠಾಣೆ ಹೆಡ್ ಕಾನ್‌ಸ್ಟೇಬಲ್ ಅಗಿದ್ದು, ಪ್ರಸ್ತುತ ವಿಜಯಪುರ ಗ್ರಾಮೀಣ ಸಿಪಿಐ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಡಿ. ಅಂಜುಟಗಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಪ್ರಶಸ್ತಿ ನೀಡಲಾಗುತ್ತಿದ್ದು, ಸಿಎಂ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಉತ್ತಮ ಸೇವೆ ಸಲ್ಲಿಸಿದ ವಿಜಯಪುರದ ಇಬ್ಬರಿಗೆ ಸಿಎಂ ಅವಾರ್ಡ್ ಲಭಿಸಿದ್ದು, ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಗೆ ಗರಿಮೆ ಬಂದಂತಾಗಿದೆ ಎಂದು ಎಸ್ ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಶಸ್ತಿಗೆ ಭಾಜನರಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net