ಅಡುಗೆ ಅನಿಲ ಸಿಲಿಂಡರ್ ಸೋರಿಕೆ

15 lxr 1
Published on

ಲಕ್ಷ್ಮೇಶ್ವರ: ಪಟ್ಟಣದ ಇಂದಿರಾ ನಗರದ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದ್ದು ಮನೆಯವರ ಮತ್ತು ಅಗ್ನಿಶಾಮಕ ದಳದವರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಇಂದಿರಾನಗರದ ರಫೀಕ್ ಬಾಗೇವಾಡಿ ಎಂಬುವವರ ಮನೆಯಲ್ಲಿ ಅಡುಗೆ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆ. ನೆರೆಹೊರೆಯವರ ಸಹಕಾರದಿಂದ ಸಿಲಿಂಡರ್ ಮೇಲೆ ತೊಯ್ದ ಬಟ್ಟೆ ಹಾಕಿ ಹೊರಗಡೆ ತಂದಿಟ್ಟಿದ್ದಾರೆ. ಅಷ್ಟರಲ್ಲಾಗಲೇ ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net