ಅಡುಗೆ ಅನಿಲ,ಆಧಾರ್ ಬಯೋಮೆಟ್ರಿಕ್‌ಗೆ ಗಡುವಿಲ್ಲ

CTD K.P.MADUSUDAN-04
Published on

ಚಿತ್ರದುರ್ಗ: ಅಡುಗೆ ಅನಿಲ ಸಂಪರ್ಕ ಹೊಂದಿರುವರರು, ಆಧಾರ್‌ಬಯೋಮೆಟ್ರಿಕ್ ನೀಡಲು ಕೊನೆ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್‌ಏಜನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದಾಗಿದೆ. ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್‌ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವುದು ಬೇಡವೆಂದು ಆಹಾರ, ನಾಗರಿಕ ಸರಬರಾಜು ಮ ತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂಧನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net