ಅಡುಗೆ ಮನೆ, ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ

14M.D.R.3
ಮದ್ದೂರು ತಾಲೂಕಿನ ಹುಳಗನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಅಡುಗೆ ಮನೆ ಹಾಗೂ ಶಾಲಾ ಕೊಠಡಿ ನಿರ್ಮಾಣಕ್ಕೆ ಹೆಮ್ಮನಹಳ್ಳಿ ಗ್ರಾಪಂ ಅಧ್ಯಕ್ಷ ನಂದೀಶ್ ಗೌಡ ಭೂಮಿಪೂಜೆ ನೆರವೇರಿಸಿದರು, ಪದ್ಮಾ, ಕಮಲಾಕ್ಷಿ, ವೀಣಾ, ಲೀಲಾವತಿ ಇದ್ದರು.
Published on

ಮದ್ದೂರು: ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಮತ್ತಷ್ಟು ಪ್ರಗತಿಯಾಗಲು ಸಾಧ್ಯ ಎಂದು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂದೀಶ್ ಗೌಡ ತಿಳಿಸಿದರು.

ತಾಲೂಕಿನ ಹೆಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನೂತನ ಅಡುಗೆ ಮನೆ ಹಾಗೂ ಶಾಲಾ ಕೊಠಡಿ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕೊಠಡಿ ಹಾಗೂ ಅಡುಗೆ ಮನೆ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು 5 ಲಕ್ಷ ರೂ. ಅನುದಾನ ನೀಡಿದ್ದಾರೆ. ಅಲ್ಲದೆ, 5 ಲಕ್ಷ ರೂ.ಗಳನ್ನು ನರೇಗಾ ಯೋಜನೆ, 5 ಲಕ್ಷ ರೂ.ಗಳನ್ನು ಬೆಂಗಳೂರಿನ ಉದ್ಯಮಿ ಶೀಲಾ ನಾಗರಾಜಾರೆಡ್ಡಿ ಹಾಗೂ ಕೃಷ್ಣೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದರು. ಗ್ರಾಪಂ ಉಪಾಧ್ಯಕ್ಷೆ ಪದ್ಮಾ, ಸದಸ್ಯರಾದ ಕಮಲಾಕ್ಷಿ, ವೀಣಾ, ಪಿಡಿಒ ಲೀಲಾವತಿ, ಶಿಕ್ಷಕರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net