

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಅಡುಗೆ ಸಿಬ್ಬಂದಿಗೆ ಗುರುವಾರ ಆಯೋಜಿಸಿದ್ದ ಪುನಶ್ಚೇತನ ಕಾರ್ಯಾಗಾರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕರಬಸಮ್ಮ ಪೂಜಾರಿ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸಹಯೋಗದಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.
ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಪರಶುರಾಮ ಹಡಗಲಿ, ಕಾರ್ಯದರ್ಶಿ ಕಾಶೀನಾಥ ಬಂಡಿ, ಮೇಘರಾಜ ಕಠಾರೆ, ವೀರೇಶ ಮಸರಕಲ್ ಇತರರು ಇದ್ದರು.