ಅಣ್ಣಾಸಾಹೇಬ ಹೆಸರಲ್ಲಿ ಪಪೂ ಕಾಲೇಜು

oplus_2
oplus_2
Published on

ಚಿಕ್ಕೋಡಿ ಗ್ರಾಮೀಣ: ಕಳೆದ ೩೫ ವರ್ಷಗಳಿಂದ ಸಹಕಾರ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಜೊಲ್ಲೆ ಗ್ರೂಪ್ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೆಸರಲ್ಲಿ ನಾಗನೂರಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಸ್ವತಂತ್ರ ಪದವಿ ಪೂರ್ವ ಕಾಲೇಜು ಆರಂಭವಾಗಲಿದೆ ಎಂದು ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ತಿಳಿಸಿದರು.

ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಸಭಾಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುವ ಧ್ಯೇಯದೊಂದಿಗೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೆಸರನ್ನೇ ಕಾಲೇಜಿಗೆ ಸೂಚಿಸುವ ಮೂಲಕ ಕೃತಜ್ಞತೆ ಸಲ್ಲಿಸಿದೆ. ಸಂಸ್ಥಾಪಕರು ಕಂಡ ಕನಸನ್ನು ಹೊಸ ಕಾಲೇಜು ಆರಂಭಿಸುವ ಮೂಲಕ ಸಾಕಾರಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

ಈ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸುವ ಜತೆಗೆ ಗುಣಾತ್ಮಕ ಶಿಕ್ಷಣ ನೀಡಬೇಕು. ಶಾಸಕಿ ಶಶಿಕಲಾ ಜೊಲ್ಲೆ ಅವರು ಈ ಶಿಷ್ಯವೇತನಕ್ಕಾಗಿ ೬೦ ಲಕ್ಷ ರೂ. ನೀಡಿದ್ದಾರೆ. ಮೌಲ್ಯಮಾಪನ ಪ್ರಕ್ರಿಯೆ ಬಳಿಕ ಅಗ್ರ ೨೦ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಫಲಿತಾಂಶ ಪ್ರಕಟ: ನಿಪ್ಪಾಣಿಯ ಅಣ್ಣಾಸಾಹೇಬ ಜೊಲ್ಲೆ ಸ್ವತಂತ್ರ ಪಪೂ ಕಾಲೇಜಿಗೆ ಪ್ರಥಮ ವರ್ಷದ ದಾಖಲಾತಿಗಾಗಿ ನಡೆಸಿದ ಶಶಿಕಲಾ ಜೊಲ್ಲೆ ವಿದ್ಯಾರ್ಥಿ ವೇತನ ಪರೀಕ್ಷೆ ೨೦೨೫ರ ಫಲಿತಾಂಶ ಪ್ರಕಟಿಸಿದರು.

ಶಿರೀಷ ಕೆರೂರ, ವಿಜಯ ರಾಹುತ್,ದೀಪಕ್ ಪಾಟೀಲ, ಎಂ.ಎ.ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net