ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

29rajesh5
Published on

ಚಾಮರಾಜನಗರ: ಪದವಿ ವಿದ್ಯಾರ್ಥಿಗಳಿಗೆ ಅನುಖುಲವಾಗುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಪೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಓ) ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಖ್ತದ್ವಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸಕರ್ಅರ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಹ ಸಂಚಾಲಕಿ ಕೆ.ಹೇಮಲತಾ ಮಾತನಾಡಿ, ರಾಜ್ಯಾದ್ಯಂತ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡದೇ, ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಮುಂದಿನ ದಿನಗಳಲ್ಲಿ ಪರೀಕ್ಷೆಗಳು ನಡೆಯಬೇಕಿದ್ದು, ಇಂದಿಗೂ ಪಾಠಗಳು ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ನ್ಯಾಯಾಲಯದಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿ ನನೆಗುದಿಗೆ ಬಿದ್ದಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂದರು.

ರಾಜ್ಯ ಸರ್ಕಾರ ಶೈಕ್ಷಣಿಕ ಚಟುವಟಿಕೆಗಳು ಸಗಾರವಾಗಿ ನಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ನಿಲುವನ್ನು ತಾಳಬೇಕು. ಅದರಂತೆ ಪದವಿ ತರಗತಿಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಸಂಚಾಲಕಿ ಯು.ಕೆ.ಚಂದನಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net