ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ

Guest Lecture 2
Published on

ಯಾಗದಿರಿ: ಸರಕಾರಿ ಪದವಿ ಕಾಲೇಜುಗಳಲ್ಲಿ ಕಳೆದ ಒಂದುವರೆ ದಶಕದಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಬದುಕು ಸೇವಾ ಭದ್ರತೆಯಿಲ್ಲದೆ ಆತಂತ್ರ ಸ್ಥಿತಿ ಎದುರಿಸುತ್ತಿದ್ದು, ನಮ್ಮ ಬೇಡಿಕೆ ಈಡೇರಿಸಲು ಸಕ್ರಾ ಮುಂದಾಗಬೇಕು ಎಂದು ಅತಿಥಿ ಉಪನ್ಯಾಸಕರ ಸಂಘದ ತಾಲೂಕಾಧ್ಯಕ್ಷ ಅರ್ಜುನ ಕನ್ಯೆಕೊಳೂರು ಒತ್ತಾಯಿಸಿದ್ದಾರೆ.

ಶುಕ್ರವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿ, ಪ್ರಸಕ್ತ ಸಾಲಿಗೆ ಕಾಲೇಜು ಇಲಾಖೆಯು ಸರಕಾರಿ ಪದವಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಂಡಿದೆ. ಆದೇಶದಲ್ಲಿ 10 ತಿಂಗಳ ವೇತನದ ಬದಲಾಗಿ ಸೆಮಿಸ್ಟರ್ಗಳ ಕಾರ್ಯಭಾರಕ್ಕೆ ತಕ್ಕಂತೆ ವೇತನವನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ. ಇದು ಅವೈಜ್ಞಾನಿಕ ಆದೇಶ. ಇದರಿಂದ ಅತಿಥಿ ಉಪನ್ಯಾಸಕರ ಬದುಕಿನ ನಿರ್ವಹಣೆಗೆ ತುಂಬಾ ಕಷ್ಟವಾಗುತ್ತದೆ ಎಂದು ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net