ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ

01 Atithi upanyasakar protest manavi
Published on

ಬಾಗಲಕೋಟೆ: ಕರ್ನಾಟಕ ರಾಜ್ಯದ ಶಿಕ್ಷಣ ಗುಣಮಟ್ಟ ಹೆಚ್ಚಾಗಲು, ಕೌಶಲ ಶಿಕ್ಷಣ ಕ್ರೀಯಾಶೀಲವಾಗಿ ಕಾರ್ಯರೂಪಕ್ಕೆ ಬರಬೇಕಾದರೆ, ವಿದ್ಯಾರ್ಥಿಗಳ ಬೌದ್ಧಿಕ ಶಿಕ್ಷಣಕ್ಕೆ ಶಕ್ತಿ ತುಂಬಬೇಕಾದರೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ ಸೇವೆ ಕಾಯಂಗೊಳಿಸಬೇಕು ಎಂದು ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯೆ ಎಐಡಿಎಸ್‌ಒ ಶಿಲ್ಪಾ ಬಿ.ಕೆ. ಹೇಳಿದರು.

ನಗರದ ಜಿಲ್ಲಾಡಳಿತ ಭವನ ಎದುರು ಬುಧವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.

ಅತಿಥಿ ಉಪನ್ಯಾಸಕರು ಸೇವೆಯು ಭದ್ರತೆ ಇಲ್ಲದೆ ಒದ್ದಾಡುತ್ತಿದ್ದಾರೆ. ಅವರ ಯಾವ ಸರ್ಕಾರಗಳು ಗಮನ ಹರಿಸುತ್ತಿಲ್ಲ. ಇದು ನಾಚಿಕೆಗೇಡಿನೆ ಸಂಗತಿ ಎಂದರು.

ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ನಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹು ದಿನಗಳಿಂದ ಸೇವೆ ಸಲ್ಲಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸರ್ಕಾರ ತಕ್ಷಣವೇ ಸೇವಾ ಭದ್ರತೆ ನೀಡಿ ಸೇವೆ ಕಾಯಂಗೊಳಿಸಬೇಕು. ಇದರಿಂದ ಅತಿಥಿ ಉಪನ್ಯಾಸಕರು ಪದವಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಮಖಂಡಿ ತಾಲೂಕ ಅಧ್ಯಕ್ಷರ ಬಸವರಾಜ ಪಾಟೀಲ, ಡಾ.ಚಂದ್ರಶೇಖರ ಕಾಳನ್ನವರ, ಪ್ರೊ.ಸಂಗಮೇಶ ಬ್ಯಾಳಿ, ಪ್ರೊ.ನಾಗಯ್ಯ ಜ್ಯೋತೆಪ್ಪನವರ, ಸುನಿಲ್ ಮಠಪತಿ ಡಾ.ಸಂತೋಷ ಕಾಳನ್ನವರ, ಜಗದೀಶ್ ಮೊಗ್ನೂರ್, ಎಂ.ವೈ.ಬಡಿಗೇರ್, ಡಾ.ಪಿ.ಕೆ.ಕಾರಬರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net