ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ಬೋಧನೆ ಮಾಡಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ.

ಇಂಗ್ಲಿಷ್ ಬೋಧನೆಗೆ ಬಿ.ಎ. ಬಿ.ಇ.ಡಿ. ಇಂಗ್ಲೀಷ್ ಐಚ್ಛಿಕ ವಿಷಯದಲ್ಲಿ ಪದವಿ ಪಡೆದಿರಬೇಕು. ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧನೆ ಮಾಡುವವರು ಸಂಬಂಧಿಸಿದ ವಿಷಯಗಳಲ್ಲಿ ಬಿ.ಎಸ್.ಸಿ. ಬಿ.ಇ.ಡಿ. (ಪಿ.ಎಂ ಅಥವಾ ಸಿ.ಬಿ.) ಪದವಿಯನ್ನು ಪಡೆದಿರಬೇಕು. ಆಸಕ್ತರು ವಿದ್ಯಾರ್ಹತೆ ಮತ್ತು ಸ್ವ-ವಿವರದ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ 2ನೇ ಮಹಡಿಯ ಕೊಠಡಿ ಸಂ 214ರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಮೇ 10 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ದೂ.ಸಂ 08226-226070 ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಹೆಚ್.ಎಸ್. ಬಿಂದ್ಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net