ಅತಿಥಿ ಶಿಕ್ಷಕರ ಸಮಸ್ಯೆ ಪರಿಹರಿಸಿ

Guest Teacher
Published on

ಹುಬ್ಬಳ್ಳಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳ ಅತಿಥಿ ಶಿಕ್ಷಕರಿಗೆ ಕೋವಿಡ್ ಪ್ಯಾಕೇಜ್, ಉದ್ಯೋಗ ಭದ್ರತೆ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಇಲಾಖೆಯಡಿ ಮುರಾರ್ಜಿ ದೇಸಾಯಿ, ಡಾ. ಅಬ್ದುಲ್ ಕಲಾಂ ಮುಂತಾದ ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅತಿಥಿ ಶಿಕ್ಷಕರಿಗೆ ಕೋವಿಡ್- 19 ಆರ್ಥಿಕ ಪ್ಯಾಕೇಜ್ ನೀಡಬೇಕು. ಮುಂಬರುವ ನೇಮಕಾತಿ ಸಂದರ್ಭದಲ್ಲಿ ಪ್ರಾತಿನಿಧ್ಯ ನೀಡಬೇಕು. ಸೇವಾ ಪ್ರಮಾಣ ಪತ್ರ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಾರೆ.

ಸೋಮವಾರ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಅತಿಥಿ ಶಿಕ್ಷಕರ ಹೋರಾಟ ಸಮಿತಿ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ವೀರಣ್ಣ ಗರಗ, ರಾಜಶೇಖರ ಪಾಟೀಲ, ಶಾಂತಮೇರಿ ದೊಡ್ಡಬಟ್ಟಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net