ಅತಿಯಾದ ಮೊಬೈಲ್ ಬಳಕೆ ಒಳ್ಳೆಯ ಬೆಳವಣಿಗೆಯಲ್ಲ

24 vtp2 Kalika Haabba
ಕಲಿಕಾ ಕಾರ್ಯಕ್ರದಲ್ಲಿ ಭಾಗವಹಸಿದ್ದ ವಿಧ್ಯಾರ್ಥಿಗಳು.
Published on

ವಿರಾಜಪೇಟೆ: ಪ್ರತಿಭೆ ಪ್ರದರ್ಶನಕ್ಕೆ ಕಲಿಕಾ ಹಬ್ಬ ಉತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಸುಬ್ರಮಣಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿರಾಜಪೇಟೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಮಕ್ಕಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ದೊರಕಿದಂತಾಗುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ತಲ್ಲೀನರಾಗುತ್ತಿದ್ದು, ಇದರಿಂದ ಕಲಿಕಾ ಗುಣಮಟ್ಟ ಕುಂಠಿತಗೊಳ್ಳುತ್ತಿದೆ. ಅತಿಯಾದ ಮೊಬೈಲ್ ಬಳಕೆ ಒಂದು ದುಶ್ಚಟವಾಗಿದ್ದು, ಇದರಿಂದ ದೂರ ಇದ್ದು ಗುರಿ ಮುಟ್ಟುವಂತಾಗಬೇಕು ಎಂದರು.

ಪುರಸಭೆ ಸದಸ್ಯೆ ಆಶಾ ಸುಬ್ಬಯ್ಯ ಮಾತನಾಡಿ, ಹೆಚ್ಚು ಕಲಿಯಲು ಕಲಿಕಾ ಹಬ್ಬ ಮಕ್ಕಳಿಗೆ ಸಹಕಾರಿ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ಜ್ಞಾನ ಹೆಚ್ಚಲಿದೆ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಕಲಿಕಾ ಹಬ್ಬ 7 ಕ್ಲಸ್ಟರ್‌ಗಳಲ್ಲಿ ಮುಗಿಯುವ ಹಂತದಲ್ಲಿದ್ದು, ಯಶಸ್ವಿಯಾಗಿ ನಡೆಯುತ್ತಿದೆ. ವಿದ್ಯಾಥಿಗಳು ಕಲಿತಿರುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.

ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪ್ರತೀಕಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಕಾಕೋಟುಪರಂಬು ಕ್ಲಸ್ಟರ್‌ನ ಶ್ರೀನಿವಾಸ್, ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹನ್, ಸದಸ್ಯೆ ಪುಷ್ಪಾ, ಬೇಟೋಳಿ ಶಾಲೆ ಮತ್ತು ಕೆದಮುಳ್ಳೂರು ಶಾಲಾ ಮುಖ್ಯ ಶಿಕ್ಷಕರಾದ ಸೀತಾ, ಜ್ಞಾನಮಣಿ, ಬಿಆರ್‌ಪಿ ಕೆ.ಸಿ.ಗೀತಾಂಜಲಿ, ದೈಹಿಕ ಶಿಕ್ಷಕ ತಮ್ಮಯ್ಯ, ಶಿಕ್ಷಕರಾದ ನಸೀಮಾ, ಮದನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net