ಅತಿವೃಷ್ಟಿ ಪ್ರಾಣ ಹಾನಿ ತಪ್ಪಿಸಿ

krishn Bairegouda
Published on

ಕಲಬುರಗಿ: ಅತಿವೃಷ್ಟಿ ನಿರೀಕ್ಷೆ ಹಿನ್ನೆಲೆಯಲ್ಲಿ ಪ್ರವಾಹದಿಂದ ಜನ, ಜಾನುವಾರು ಪ್ರಾಣ ಹಾನಿ ತಪ್ಪಿಸುವುದು ಮೊದಲ ಆದ್ಯತೆ ಆಗಬೇಕು. ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪ್ರವಾಹ ಪರಿಹಾರ ಕೊಡುವುದು ಕರ್ತವ್ಯ. ಅದಕ್ಕಿಂತ ಮುನ್ನ ಹಾನಿ ತಡೆಯುವುದು ಸರ್ಕಾರದ ಉz್ದೆÃಶ. ಪ್ರವಾಹಕ್ಕೆ ಮುನ್ನ ಸಿದ್ಧತೆ ಮಾಡಿಕೊಳ್ಳಿ. ಪ್ರವಾಹ ಭೀತಿ ಇರುವ ನದಿ, ಜಲಾಶಯ ಪಕ್ಕದ ಜನ, ಜಾನುವಾರ ರಕ್ಷಿಸಬೇಕು, ಟಾಸ್ಕ್ಪೋರ್ಸ್ ರಚಿಸಬೇಕು. ಕಲಬುರಗಿ, ವಿಜಯಪು ಜಿಲ್ಲೆಗೆ ಭೀಮಾ ನದಿ ಪ್ರವಾಹ ಭೀತಿ ಇದ್ದು, ಮಹಾರಾಷ್ಟç ಸರ್ಕಾರದ ಜತೆ ಸಂಪರ್ಕದಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ತಾತ್ಕಾಲಿಕ ಪರಿಹಾರ ರಸ್ತೆ, ಅಂಗನವಾಡಿ, ಶಾಲೆ ಕಟ್ಟಡ ದುರಸ್ತಿ, ರಸ್ತೆ ಸಂಪರ್ಕ ಜೋಡಣೆ ಸೇರಿ ಎಲ್ಲ ಕಾಮಗಾರಿ ತಿಂಗಳಲ್ಲಿ ಪೂರ್ಣಗೊಳಿಸಬೇಕು. ಕಂದಾಯ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.
ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ೧೩೫ ಪ್ರವಾಹ ಸಮಸ್ಯಾತ್ಮಕ ಹಳ್ಳಿ ಗುರುತಿಸಿ, ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ೨೦೨೦ರಲ್ಲಿ ಉಜನಿ ಜಲಾಶಯದಿಂದ ಭೀಮಾ ನದಿಗೆ ೮ ಲಕ್ಷ ಕ್ಯೂಸೆಕ್ ನೀರು ಬಿಟ್ಟಿದ್ದರಿಂದ ೧೧ ಹಳ್ಳಿ ಸಮಸ್ಯೆಗೀಡಾಗಿದ್ದವು. ೬೫ ಕಾಳಜಿ ಕೇಂದ್ರ, ಪ್ರಾಣಿಗಳಿಗೆ ೪೦ ಪುನರ್ವಸತಿ ಕೇಂದ್ರಕ್ಕೆ ಸಿದ್ಧತೆ ಮಾಡಲಾಗಿದೆ ಎಂದರು.
ಯಾದಗಿರಿ ಡಿಸಿ ಡಾ.ಸುಶೀಲಾ ಬಿ.ಮಾತನಾಡಿ, ಜಿಲ್ಲೆಯಲ್ಲಿ ಕೃಷ್ಣಾ, ಭೀಮಾ ನದಿ ಪ್ರವಾಹಕ್ಕೆ ೮೦ ಹಳ್ಳಿ ಸಂಕಷ್ಟಕ್ಕೆ ಸಿಲುಕುವ ಅಂದಾಜಿದ್ದು, ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಬೀದರ್ ಜಿಲ್ಲೆಯಲ್ಲಿ ಪ್ರವಾಹಕ್ಕೆ ಹಳ್ಳಿ ಮುಳುಗಡೆಯಾಗುವುದಿಲ್ಲ. ಬಹುತೇಕ ಮನೆಗಳು ಮಣ್ಣಿನಿಂದ ನಿರ್ಮಿಸಿದ್ದರಿಂದ ಮನೆ ಹಾನಿ ಹೆಚ್ಚಲಿದೆ ಎಂದು ಡಿ.ಸಿ.ಗೋವಿಂದರೆಡ್ಡಿ ತಿಳಿಸಿದರು.
ಬಳ್ಳಾರಿಯಲ್ಲಿ ೧೯, ಕೊಪ್ಪಳದಲ್ಲಿ ೨೭ ಹಾಗೂ ವಿಜಯನಗರ ಜಿಲ್ಲೆಯಲ್ಲಿ ೨೨ ಹಳ್ಳಿ ಸಮಸ್ಯಾತ್ಮಕ ಇವೆ ಎಂದು ಕ್ರಮವಾಗಿ ಡಿ.ಸಿ. ಪ್ರಶಾಂತಕುಮಾರ ಮಿಶ್ರಾ, ನಳಿನ್ ಕುಮಾರ ಅತುಲ್ ಹಾಗೂ ಎಂ.ಎಸ್.ದಿವಾಕರ ತಿಳಿಸಿದರು. ರಾಯಚೂರು ಜಿಲ್ಲೆಯಲ್ಲಿ ಎಲ್ಲ ತಾಲೂಕು ಪ್ರವಾಹಕ್ಕೆ ತುತ್ತಾಗುತ್ತವೆ. ೨೦೦೯ರಲ್ಲಿ ನಾರಾಯಣಪುರ ಜಲಾಶಯದಿಂದ ೬ ಲಕ್ಷ ನೀರು ಬಿಟ್ಟಿದ್ದರಿಂದ ಪ್ರವಾಹ ಎದುರಾಗಿತ್ತು. ೭೦ ಹಳ್ಳಿ ಗುರುಸಲಾಗಿದೆ ಎಂದು ಡಿ.ಸಿ.ಚಂದ್ರಶೇಖರ ನಾಯಕ್ ತಿಳಿಸಿದರು.
ಮಳೆಗಾಲದಲ್ಲಿ ಕಲುಷಿತ ನೀರು ಪೂರೈಕೆ ಆಗದಂತೆ ಶುದ್ಧೀಕರಿಸಿದ ಕುಡಿಯುವ ನೀರು ಪೂರೈಸಲು ಗಂಭೀರವಾಗಿ ಇರಬೇಕು. ನಿಷ್ಕಾಳಜಿ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ.ರಶ್ಮಿ ಮಹೇಶ, ಕಂದಾಯ ಇಲಾಖೆ ಆಯುಕ್ತ ಪಿ. ಸುನೀಲಕುಮಾರ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಆರ್‌ಸಿ ಕೃಷ್ಣಾ ಬಾಜಪೇಯಿ, ಎಸ್‌ಎಸ್‌ವೈ ನಿರ್ದೇಶಕ ರಂಗಪ್ಪ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಷನ್ ಎಂ.ಡಿ ವಸಂತಕುಮಾರ, ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net