ಅತ್ಯಾಚಾರ ಖಂಡಿಸಿ ಪ್ರತಿಭಟನೆ

9 (1)
Published on

ಮೈಸೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.


ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಟ್ಯೂಷನ್ ಶಿಕ್ಷಕ ಕಾಂತರಾಜು ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶಾದ್ಯಂತ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರವನ್ನು ತಡೆಗಟ್ಟಲು ಸೂಕ್ತ ಕಾನೂನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.


ಸಮಿತಿ ಮುಖಂಡರಾದ ವಿ.ಪಿ. ಸುಶೀಲಾ, ಎಂ. ಪುಟ್ಟರಾಜು, ಭಾಗ್ಯಮ್ಮ, ಚಾಮರಾಜು, ಕೃಷ್ಣಪ್ಪ, ಮಲ್ಲಮ್ಮ, ಎಚ್.ಎನ್. ಭಾಗ್ಯಮ್ಮ, ಬಬಿತಾ, ಶಾಹಿದಾ, ಶರತ್‌ರಾಜ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net