ಅತ್ಯಾಚಾರಿ-ಕೊಲೆಗಾರರಿಗೆ ಕಠಿಣ ಶಿಕ್ಷೆಯಾಗಲಿ

14-july-hdl--01
Published on

ಹೂವಿನಹಡಗಲಿ: ಬೆಂಗಳೂರಿನಲ್ಲಿ ಕೊಪ್ಪಳ ಜಿಲ್ಲೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ಶಿಳ್ಳೆಕ್ಯಾತರ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಸಮಿತಿ ಸದಸ್ಯ ಕೆ.ಸಿ.ಪರಶುರಾಮ ಮಾತನಾಡಿ, ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುವ ಪಾಲಕರೊಂದಿಗಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಡಿ.ಕೆ.ಪರಶುರಾಮ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು, ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ದೂರಿದರು. ಸಂಘದ ಸದಸ್ಯರಾದ ದೊಡ್ಡಮನಿ ಪರಶುರಾಮ, ಶಿವಕುಮಾರ್ ಯಡಮಾಲಿ, ಎಂ.ಪರಶುರಾಮ, ಚಿಂಚಲಿ ಪರಶುರಾಮ, ರವೀಂದ್ರಗೌಡ, ಪ್ರಮುಖರಾದ ಜೆ.ಶಿವರಾಜ, ಹನುಮಕ್ಕ, ಕೆ.ಲಲಿತಮ್ಮ, ಆಶಾ, ದುರುಗೇಶ, ಜೆ.ಪ್ರಕಾಶ್, ಟಿ.ಮುತ್ತಪ್ಪ ಕೆ.ಸಿ.ದುರುಗೇಶ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net