

ಹಾವೇರಿ: ಉತ್ತರಪ್ರದೇಶದ ಹಾಥರಸ್ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಮೌನ ಮೆರವಣಿಗೆ ನಡೆಸಿ, ನಂತರ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಹಾಥರಸ್ನಲ್ಲಿ ದಲಿತ ಯುವತಿಯ ಮೇಲೆ ಅದೇ ಗ್ರಾಮದ ನಾಲ್ವರು ಅತ್ಯಾಚಾರ ನಡೆಸಿ ಕೊಲೆಗೈದಿದ್ದಾರೆ. ಈ ಪ್ರಕರಣವನ್ನು ಉತ್ತರಪ್ರದೇಶ ಸರ್ಕಾರವು ಮುಚ್ಚಿಹಾಕಲು ಯತ್ನಿಸಿದೆ.. ಯುವತಿಯ ಮೃತದೇಹವನ್ನು ಕುಟುಂಬದವರಿಗೆ ನೀಡದೇ ಪೊಲೀಸರೇ ಸುಟ್ಟು ಹಾಕಿದ್ದಾರೆ. ಯುವತಿಯ ಕುಟುಂಬವನ್ನು ಗೃಹಬಂಧನದಲ್ಲಿರಿಸಿ, ಉತ್ತರಪ್ರದೇಶದ ರಾಜ್ಯ ಸರ್ಕಾರವು ತೊಂದರೆ ನೀಡುತ್ತಿದೆ. ಕೂಡಲೆ ಯುವತಿಯ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ರಮೇಶ ಆನವಟ್ಟಿ, ಅಶೋಕ ತಳವಾರ, ದಲಿತ ಸಂಘದ ಅಧ್ಯಕ್ಷ ಉಡಚಪ್ಪ ಮಾಳಗಿ, ಶೇಖರ ಕಳ್ಳಿಮನಿ, ನಿಂಗಪ್ಪ ನಿಂಬಕ್ಕನವರ, ಶಿವಬಸಪ್ಪ ದೊಡ್ಡತಳವಾರ, ಬಸವರಾಜ ಹಾದಿಮನಿ, ಅಶೋಕ ದುರಗಣ್ಣನವರ, ಮಹಾಂತೇಶ ಹೊಳೆಮ್ಮನವರ, ನಾಗರಾಜ ಬಡಮ್ಮನವರ, ಸದಾನಂದ ಸವೂರ, ಸಂಜಯಗಾಂಧಿ ಸಂಜೀವಣ್ಣನವರ, ಮಲ್ಲಿಕಾರ್ಜುನ ಬೂದಗಟ್ಟಿ ಇತರರು ಪ್ರತಿಭಟನೆಯಲ್ಲಿದ್ದರು.