

ಮೈಸೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಂಜನಗೂಡು ತಾಲೂಕಿನ ತಗಡೂರು ಗ್ರಾಮದ ಶರಣ್ ಶಿಕ್ಷೆಗೆ ಗುರಿಯಾದ ಅಪರಾಧಿ.
ಈತ ಅದೇ ಗ್ರಾಮದ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದು, 2021ರಂದು ಜ.4ರಂದು ಆಕೆಯನ್ನು ಬೈಕ್‌ನಲ್ಲಿ ಅಪಹರಿಸಿಕೊಂಡು ವಯನಾಡ್ ಜಿಲ್ಲೆಯ ಕಂಬಳಕ್ಕಡ್ ಗ್ರಾಮಕ್ಕೆ ಹೋಗಿದ್ದ.
ಅಲ್ಲಿ ಒಬ್ಬರ ಮನೆಯಲ್ಲಿ ಕೂಲಿಗೆ ಇರಿಸಿ, ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ್ದ. ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಂಜನಗೂಡು ಡಿವೈಎಸ್‌ಪಿ ಗೋವಿಂದರಾಜು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆಯಲ್ಲಿ ಈತನ ಮೇಲಿನ ಆರೋಪಗಳು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಪಿ.ಆನಂದ್ ಹೊಗಾಡೆ ಅವರು ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿದ್ದು,
ದಂಡದ ಹಣವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲೆ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.