ಅತ್ಯಾಚಾರಿಗೆ ೨೦ ವರ್ಷ ಜೈಲು ಶಿಕ್ಷೆ

Published on

ವಕ್ಕಲೇರಿ ಗ್ರಾಮದ ನಿವಾಸಿ ಮುನಿರಾಜು (೪೨) ಶಿಕ್ಷೆಗೆ ಗುರಿಯಾದ ಅಪರಾಧಿ. ೨೦೧೮ರ ಜೂ ೧೬ರಂದು ಅದೇ ಗ್ರಾಮದ ೧೦ ವರ್ಷದ ಬಾಲಕಿಯನ್ನು ರಾತ್ರಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಅಪ್ತಾಪ್ತೆಯ ಪಾಲಕರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಅಂದಿನ ತನಿಖಾಧಿಕಾರಿಗಳಾಗಿದ್ದ ಸಿಪಿಐ ರಾಜಣ್ಣ ಮತ್ತು ಎಸ್.ಆರ್. ಜಗದೀಶ್ ತನಿಖೆ ಕೈಗೊಂಡು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗೆ ೨೦ ವರ್ಷ ಜೈಲು ಶಿಕ್ಷೆ ಹಾಗೂ ೨೫,೦೦೦ ರೂ. ದಂಡ ವಿಧಿಸಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕೋಲಾರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net