

ಚಿತ್ರದುರ್ಗ: ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಅತ್ಯುತ್ತಮ ಶಾಲೆ ಪ್ರಶಸ್ತಿಗೆ ಚಿತ್ರದುರ್ಗ ಸೀಬಾರ-ಗುತ್ತಿನಾಡು ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಭಾಜನವಾಗಿದೆ.
ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಅನುದಾನ ರಹಿತ ಶಾಲೆಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಸಂಘ ಗುರುತಿಸಿದ್ದು, ಬೆಂಗಳೂರಿನಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಂಸ್ಥೆ ಅಧ್ಯಕ್ಷ ಟಿ.ಎಚ್.ಬುಡೇನ್‌ಸಾಬ್ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಎಂ.ನೀಲಕಂಠದೇವರು ತಿಳಿಸಿದ್ದಾರೆ.
ಸಂಸ್ಥೆ ಆಡಳಿತ ಮಂಡಳಿ ಸದಸ್ಯರಾದ ಮೌಲಾನ್‌ಸಾಬ್, ಮಹಮ್ಮದ್ ಮಿರ್ಜಾಸಾಬ್ ಸಮಾರಂಭದಲ್ಲಿ ಭಾಗಿಯಾಗಿದ್ದರು.