ಅಥಣಿ ತಾಲೂಕಿನಲ್ಲಿ ಕೋವಿಡ್ ನಿಯಂತ್ರಣ

14Athni2
ಅಥಣಿ ಪಟ್ಟಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುದ್ದಿಗಾರ ರೊಂದಿಗೆ ಮಾತನಾಡಿದರು. ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ, ಗಜಾನನ ಮಂಗಸೂಳಿ, ಸದಾಶಿವ ಬುಟಾಳೆ, ಸತ್ಯಪ್ಪ ಬಾಗೆಣ್ಣವರ ಇದ್ದರು.
Published on

ಅಥಣಿ: ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ ಕರೊನಾ ರೋಗಿಗಳಿಗೆ ಕೈಗೊಂಡಿರುವ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ, ಆಸ್ಪತ್ರೆ ವೈದ್ಯರಿಂದ ಮಾಹಿತಿ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಥಣಿ ತಾಲೂಕಿನಲ್ಲಿ ಕರೊನಾ ನಿಯಂತ್ರಣಕ್ಕೆ ಬಂದಿದೆ. ಮೊದಲಿನ ಭೀಕರತೆ ಇಲ್ಲ. ಆಸ್ಪತ್ರೆಯಲ್ಲಿ ಆಕ್ಸಿಜನ್, ಬೆಡ್, ಔಷಧ ವ್ಯವಸ್ಥೆ ಇದೆ. ಸಂಭವನೀಯ ಮೂರನೆಯ ಅಲೆ ತಡೆಗೆ ತಯಾರಿ ಮಾಡಿಕೊಳ್ಳುವುದು ಅವಶ್ಯ ಎಂದರು. ಸರ್ಕಾರಿ ಆಸ್ಪತ್ರೆಗೆ ಬೇಕಾಗುವ ಎಲ್ಲ ವೈದ್ಯಕೀಯ ವ್ಯವಸ್ಥೆ, ಔಷಧಗಳನ್ನು ಸರ್ಕಾರ ಪೂರೈಕೆ ಮಾಡಬೇಕು. ಆಕ್ಸಿಜನ್ ಬೆಡ್ ವ್ಯವಸ್ಥೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು ಎಂದು ಅಭಿಪ್ರಾಯಪಟ್ಟರು. ಕೇಂದ್ರ ಸರ್ಕಾರ ತೈಲಬೆಲೆ, ದಿನಬಳಕೆ ವಸ್ತುಗಳ ದರ ಏರಿಕೆಯಾಗಿದೆ. ಅದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಾಗೃತಿ ಮೂಡಿಸುತ್ತಿದ್ದಾರೆ. ಪಕ್ಷದಿಂದ ಪ್ರತಿಭಟನೆ ಕೈಗೊಳ್ಳಲಾಗುತ್ತಿದೆ ಎಂದರು.

ಬಿಎಸ್‌ವೈ ಪೂರ್ಣ ಅವಧಿ ಮುಗಿಸಲಿ: ಸಿಎಂ ಬದಲಾವಣೆ ಕುರಿತು ಮಾತನಾಡಿದ ಸತೀಶ, ಬಿ.ಎಸ್.ಯಡಿಯೂರಪ್ಪ ಪೂರ್ಣ ಅವಧಿ ಪೂರೈಸಲಿ. ಅವರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಡೆಯಲಿ. ಸದ್ಯ ಜನರು ಸಂಕಷ್ಟದಲ್ಲಿದ್ದಾರೆ. ಜನಪ್ರತಿನಿಧಿಗಳು ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ತೊಡಗಬೇಕು ಎಂದರು. ಕಾಂಗ್ರೆಸ್‌ನಿಂದ ಆಹಾರ ಧಾನ್ಯಗಳ ಕಿಟ್ ಮತ್ತು ಸತೀಶ ಶುಗರ್ಸ್‌ ವತಿಯಿಂದ ಅಲೆಮಾರಿ ಜನಾಂಗದವರಿಗೆ, ಕೂಲಿ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸಲಾಯಿತು. ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮುಖಂಡರಾದ ಗಜಾನನ ಮಂಗಸೂಳಿ, ಸದಾಶಿವ ಬುಟಾಳೆ, ಸತ್ಯಪ್ಪ ಬಾಗೆಣ್ಣವರ, ಧರೆಪ್ಪ ಠಕ್ಕಣ್ಣವರ, ರಮೇಶ ಸಿಂದಗಿ, ಸಿದ್ಧಾರ್ಥ ಸಿಂಗೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net