

ಗುಂಡ್ಲುಪೇಟೆ : ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ನಿರಂಜನಕುಮಾರ್ ಅಧ್ಯಕ್ಷತೆಯಲ್ಲಿ ದಸರಾ ಆಚರಣೆ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ ನಂತರ ಈ ಬಾರಿ ಗುಂಡ್ಲುಪೇಟೆ ದಸರೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.
ನಾಡಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕು. ತೆರೆಮರೆಯ ಪ್ರತಿಭೆಗಳನ್ನು ಹಾಗೂ ಯುವ ಕವಿಗಳನ್ನು ಗುರುತಿಸಿ ಅವರಿಗೆ ಅವಕಾಶ ನೀಡಬೇಕು. ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ಹೆಚ್ಚಿನ ಜನರನ್ನು ಆಕರ್ಷಿಸಬೇಕು. ಜಾನಪದ ಕಲಾ ತಂಡಗಳನ್ನು ಒಗ್ಗೂಡಿಸಿಕೊಳ್ಳಬೇಕು ಎಂದು ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ಸಲಹೆ ನೀಡಿದರು.
ತಹಸೀಲ್ದಾರ್ ರವಿಶಂಕರ್, ತಾಪಂ ಇಒ ಶ್ರೀಕಂಠರಾಜೇ ಅರಸ್, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಬಿಇಒ ಶಿವಮೂರ್ತಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕಸಾಪ ಜಿಲ್ಲಾಧ್ಯಕ್ಷ ಶೈಲೇಶ್‌ಕುಮಾರ್, ಮಾನವ ಬಂಧುತ್ವ ವೇದಿಕೆ ಜಿಲ್ಲಾಧ್ಯಕ್ಷ ಸುಭಾಷ್ ಮಾಡ್ರಹಳ್ಳಿ ಇತರರು ಹಾಜರಿದ್ದರು.
.