ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ

6kmr1
ಕಮಲನಗರದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸ್ವಾತಂತ್ರ್ಯದಿನಾಚರಣೆ ನಿಮಿತ್ತ ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನಶೆಟ್ಟಿ, ತಾಪಂ ಇಒ ಹಣಮಂತರಾಯ ಕೌಟಗೆ, ಸಿಪಿಐ ಶ್ರೀಕಾಂತ ಅಲ್ಲಾಪುರ, ಪಿಎಸ್‌ಐ ಆಶಾ ರಾಠೋಡ್ ಇತರರಿದ್ದರು.
Published on

ಕಮಲನಗರ: ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಪೂರ್ವಭಾವಿ ಸಭೆ ನಡೆಯಿತು.

ತಹಸೀಲ್ದಾರ್ ಕುಲಕರ್ಣಿ ಮಾತನಾಡಿ, ತಾಲೂಕು ಆಡಳಿತದಿಂದ ಆ.೧೫ರಂದು ನಡೆಯಲಿರುವ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುವುದು. ಎಲ್ಲ ಹಬ್ಬಗಳಿಗಿಂತಲೂ ಸ್ವಾತಂತ್ರ್ಯಹಬ್ಬ ಸರ್ವಶ್ರೇಷ್ಠವಾಗಿದ್ದು, ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ತಾಪಂ ಇಒ ಹಣಮಂತರಾಯ ಕೌಟಗೆ ಮಾತನಾಡಿ, ತಾಲೂಕು ಆಡಳಿತದಿಂದ ಆಚರಿಸುವ ಸ್ವಾತಂತ್ರೋತ್ಸವದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಪ್ರೌಢ ಶಾಲಾ ಮಕ್ಕಳಿಗೆ ಭಾಷಣ ಮತ್ತು ನಿಬಂಧ ಸ್ಪರ್ಧೆ ಏರ್ಪಡಿಸಿ ವಿಜೇತ ಮಕ್ಕಳಿಗೆ ತಾಲೂಕು ಆಡಳಿತದಿಂದ ಗೌರವಿಸುವುದು ಸೇರಿ ನಿವೃತ್ತ ಹಿರಿಯ ಯೋಧರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಹಲವು ಇಲಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿದ್ದ ಕಾರಣ, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಆಕ್ರೋಶ ಹೊರಹಾಕಿ, ಗೈರಾದವರ ವಿರುದ್ಧ ನೋಟಿಸ್ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನಶೆಟ್ಟಿ, ಸಿಪಿಐ ಶ್ರೀಕಾಂತ ಅಲ್ಲಾಪುರ, ಪಿಎಸ್‌ಐ ಆಶಾ ರಾಠೋಡ್, ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ, ಶಿವಕುಮಾರ ಝುಲ್ಪೆ, ಬಸವರಾಜ ಪಾಟೀಲ್, ವೈಜಿನಾಥ ವಡ್ಡೆ, ಪ್ರವೀಣ ಕುಲಕರ್ಣಿ, ಜನಾರ್ದನ ಸಾವರ್ಗೇಕರ್, ದಿಲೀಪ ಮುಧಾಳೆ, ಗೋವಿಂದರಾವ ತಾಂದಳೆ, ಅಮೂಲ ಸೂರ್ಯವಂಶಿ, ವಿವಿಧ ಇಲಾಖೆ ಅಧಿಕಾರಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net