ಅದ್ದೂರಿಯಾಗಿ ಗಾಂಧಿ ಜಯಂತಿ ಆಚರಣೆ

30ydg02
Published on

ಯಾದಗಿರಿ: ಜಿಲ್ಲಾಡಳಿತದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ತಿಳಿಸಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅ.02ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಲಿದ್ದಾರೆ. ಅ.01ರಂದು ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಪಂಗಳ ವ್ಯಾಪ್ತಿಯಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಲಿದೆ ಎಂದರು.

ವಾತರ್ಾ ಇಲಾಖೆಯಿಂದ ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ , ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾಥರ್ಿಗಳಿಗೆ ಬಾಪೂಜಿ ಜೀವನ, ಹೋರಾಟ ಪ್ರಬಂಧ ಸ್ಪಧರ್ೆಯನ್ನು ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾಥರ್ಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಹೇಳಿದರು.

ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಎಲ್ಲರಿಗೂ ಮಾರ್ಗದಶರ್ಿಯಾಗಿವೆ. ವಿಶ್ವದಲ್ಲಿಯೇ ಮೇರು ವ್ಯಕ್ತಿತ್ವವನ್ನು ಹೊಂದಿದ್ದ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net