ಅದ್ದೂರಿಯಾಗಿ ಜರುಗಿದ ಶ್ರೀ ಬನಶಂಕರಿ ಅಮ್ಮನವರ ಮೆರವಣಿಗೆ

16 ckm 5
ಚಿಕ್ಕಮಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಬನಶಂಕರಿ ಅಮ್ಮನವರ ಬನದ ಹುಣ್ಣಿಮೆಯ ಜಾತ್ರಾಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು.
Published on

ಚಿಕ್ಕಮಗಳೂರು: ನಗರದ ಎಂ.ಜಿ.ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಬನಶಂಕರಿ ಅಮ್ಮನವರ ಬನದ ಹುಣ್ಣಿಮೆಯ ಜಾತ್ರಾಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು.

ದೇವಾಂಗ ಸಂಘ ಮತ್ತು ಬನಶಂಕರಿ ಮಹಿಳಾ ಸಂಘದ ವತಿಯಿಂದ ಆಯೋಜಿಸಿದ್ದ ಜಾತ್ರಾ ಮಹೋತ್ಸವದಲ್ಲಿ ಮತ್ತು ಮೆರವಣಿಗೆಯಲ್ಲಿ ಭಕ್ತರು ಪಾಲ್ಗೊಳ್ಳುವ ಮೂಲಕ ಬನಶಂಕರಿ ದೇವಿಯ ಕೃಪೆಗೆ ಪಾತ್ರರಾದರು.

ದೇವಾಂಗ ಸಂಘದ ಅಧ್ಯಕ್ಷ ಭಗವತಿ ಹರೀಶ್, ದೇವಾಂಗ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ್, ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ಸುವರ್ಣ ಕೇಶವಮೂರ್ತಿ, ಉಪಾಧ್ಯಕ್ಷರಾದ ಸಿ.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಟಿ. ತ್ಯಾಗರಾಜ್, ಖಜಾಂಚಿ ಜೆ.ಎಸ್. ರವಿಶಂಕರ್, ಲೋಹಿತ್, ಕೃಷ್ಣಮೂರ್ತಿ, ಗೌರೀಶ್, ಚಂದ್ರು, ನಿರ್ದೇಶಕರಾದ ರಾಮಚಂದ್ರ, ಮೋಹನ್‌ಕುಮಾರ್, ಗೋವಿಂದಶೆಟ್ಟಿ, ರಾಜಕುಮಾರ್, ಪ್ರಕಾಶ್, ನವೀನ್‌ಕುಮಾರ್, ಶಿವರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net