ಅದ್ಧೂರಿಯಾಗಿ ನಡೆದ ಶೋಭಾಯಾತ್ರೆ

DSC_0110
ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆ ವೇಳೆ ಹನುಮಂತಪ್ಪ ವೃತ್ತದಲ್ಲಿ ನೆರೆದಿದ್ದ ಭಾರಿ ಜನಸ್ತೋಮ.
Published on

ಚಿಕ್ಕಮಗಳೂರು: ಶ್ರೀ ಗುರು ಇನಾಂ ದತ್ತಾತ್ರೇಯ ಪೀಠದಲ್ಲಿ ಶನಿವಾರ ತೆರೆ ಕಾಣಲಿರುವ ದತ್ತಜಯಂತಿ ಉತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಶುಕ್ರವಾರ ಸಂಜೆ ಶೋಭಾಯಾತ್ರೆ ಅದ್ಧೂರಿಯಾಗಿ ನಡೆಯಿತು.

ಪೂರ್ವ ನಿಗದಿಯಂತೆ ಮಧ್ಯಾಹ್ನ ೨.೩೦ಕ್ಕೆ ಶೋಭಾಯಾತ್ರೆ ಇಲ್ಲಿನ ಶ್ರೀ ಕಾಮಧೇನು ಗಣಪತಿ ದೇವಸ್ಥಾನದಿಂದ ಹೊರಟಿತು. ಆರಂಭದಲ್ಲಿ ದತ್ತಮಾಲಾಧಾರಿಗಳ ಸಂಖ್ಯೆ ಕಡಿಮೆಯಂತೆ ಕಂಡು ಬಂದರೂ ಟೌನ್ ಕ್ಯಾಂಟಿನ್ ವೃತ್ತದಿಂದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗಿ ಹನುಮಂತಪ್ಪ ವೃತ್ತಕ್ಕೆ ಬರುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಮಾಲಾಧಾರಿಗಳು ರಸ್ತೆಯ ಉದ್ದಕ್ಕೂ ಕಂಡುಬAದರು.

ತAಡೋಪ ತಂಡವಾಗಿ ಯಾತ್ರೆಯಲ್ಲಿ ಸಾಗಿದ ಯುವಕರು ಮುಗಿಲು ಮುಟ್ಟುವಂತೆ ಘೋಷಣೆ ಹಾಕುತ್ತಿದ್ದರು, ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆಗೆ ರಸ್ತೆಯ ಉದ್ದಕ್ಕೂ ನಿಂತಿದ್ದ ಸಾರ್ವಜನಿಕರು ಧ್ವನಿ ಗೂಡಿಸುತ್ತಿದ್ದರು. ಶೋಭಾಯಾತ್ರೆಯಲ್ಲಿ ಡಿಜೆ, ಗೊಂಬೆ ಮೇಳ, ಹಳ್ಳಿ ವಾದ್ಯಗಳು ಇದ್ದವು. ಚಿಕ್ಕಮಗಳೂರು ನಗರ ಪ್ರದೇಶದ ಯುವಕ, ಯುವತಿಯರು ಹಾಗೂ ಬಿಜೆಪಿಯ ಮುಖಂಡರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಶೋಭಾಯಾತ್ರೆಯಲ್ಲಿ ಐದು ಸಾವಿರಕ್ಕೂ ಅಧಿಕ ಜನ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದರು. ಶೊಭಾಯಾತ್ರೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸಂಪೂರ್ಣ ಕೇಸರಿಮಯವಾಗಿದ್ದು, ಅದೇ ಹುಮ್ಮಸ್ಸಿನಲ್ಲಿ ಶೋಭಾಯಾತ್ರೆಯಲ್ಲಿ ಮಾಲಾಧಾರಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಹನುಮಂತಪ್ಪ ವೃತ್ತದ ಮೂಲಕ ಎಂ.ಜಿ. ರಸ್ತೆಯಿಂದ ಆಜಾದ್ ಪಾರ್ಕ್ ವೃತ್ತಕ್ಕೆ ತಲುಪಿದ ಬಳಿಕ ಯಾತ್ರೆ ಮುಕ್ತಾಯಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net