ಅಧಿಕ ಶುಲ್ಕ ಪಡೆಯುವ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳಿ

26 ckm 5
ಚಿಕ್ಕಮಗಳೂರು ಬಿಇಓ ರವೀಶ್‌ ಅವರಿಗೆ ಮನವಿ ಸಲ್ಲಿಸಿದ ಕರವೇ ಕಾರ್ಯಕರ್ತರು ಅಧಿಕ ಶುಲ್ಕ ವಿಧಿಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು, ಕೆಂಪನಹಳ್ಳಿ ಅಶೋಕ್, ಪಂಚಾಕ್ಷರಿ, ಕುಮಾರ್‌ ಆರ್.ಶೆಟ್ಟಿ, ಪೂರ್ಣಿಮಾ ಮತ್ತಿತರರಿದ್ದರು.
Published on
ಚಿಕ್ಕಮಗಳೂರು: ಸರ್ಕಾರ ವಿಧಿಸಿರುವ ಶುಲ್ಕಕ್ಕಿಂತ ಅಧಿಕ ಪಡೆಯುವ ಖಾಸಗೀ ಶಾಲೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಕರವೇ ಮುಖಂಡರುಗಳು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್‌, ವಿದ್ಯಾರ್ಥಿಗಳ ಸಮಗ್ರ ವಿದ್ಯಾಭ್ಯಾಸಕ್ಕಾಗಿ ಪಾಲಕರು ಅನೇಕ ಕಷ್ಟಗಳ ನಡುವೆ ಖಾಸಗಿ ಶಾಲೆಗಳನ್ನು ಸೇರಿಸುತ್ತಿದ್ದಾರೆ. ಆದರೆ ಕೆಲವು ಶಾಲೆ ಗಳು ಅಧಿಕ ಶುಲ್ಕ, ಸಮವಸ್ತ್ರವನ್ನು ಕಡ್ಡಾಯವಾಗಿ ಶಾಲೆಗಳಲ್ಲೇ ತೆಗೆದುಕೊಳ್ಳಬೇಕಿದೆ ಎಂದು ಒತ್ತಾಯಿಸುತ್ತಿವೆ ಎಂದರು. ಭವಿಷ್ಯದ ಪ್ರಜೆಗಳಾಗಿ ರೂಪುಗೊಳ್ಳುವ ಮಕ್ಕಳಿಗೆ ಶಾಲೆಗಳಲ್ಲಿ ಪರಿಣಿತ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿಲ್ಲ. ಜೊತೆಗೆ ಬಡ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಕೊಡಿಸುವುದು ಬಹುದೊಡ್ಡ ಕನಸಾಗಿದೆ ಎಂದು ಹೇಳಿದರು. ಆದ್ದರಿಂದ ತಾಲೂಕಿನ ಯಾವುದೇ ಖಾಸಗೀ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಅಧಿಕ ಶುಲ್ಕ ವಿಧಿಸುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪರಿಣಿತ ಶಿಕ್ಷಕರನ್ನು ಕಡ್ಡಾಯವಾಗಿ ನೇಮಿಸು ವಂತೆ ಸೂಚಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್. ಶೆಟ್ಟಿ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಪೂರ್ಣಿಮಾ, ನಗರಾಧ್ಯಕ್ಷೆ ಮಂಜುಳಾಬಾಯಿ, ಮುಖಂಡರಾದ ಮಂಜುನಾಥ್, ಇಮ್ರಾನ್, ರಾಧಾ, ರಂಜಿತ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net