ಅಧಿಕಾರ ಸ್ವೀಕಾರ

03-GPT-2-Dr.Arun
Published on

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞ ಡಾ.ಆರ್.ಎಂ.ಅರುಣ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಶಸ್ತ್ರಚಿಕಿತ್ಸಕ ಡಾ.ಮಂಜುನಾಥ್ ಅವರ ಬದಲಿಗೆ ಡಾ.ಅರುಣ್ ಅವರನ್ನು ನಿಯೋಜಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಶ್ವೇಶ್ವರಯ್ಯ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net