

ಚಿತ್ರದುರ್ಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಎಲ್‌ಇಡಿ ಸ್ಕ್ರೀನ್ ಅಳವಡಿಸುವಲ್ಲಿ ವಿಳಂಬ ಧೋರಣೆ ಅನುಸರಿಸಿ, ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಸುಚೇತ ಎಂ.ನೆಲವಗಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಅಧ್ಯಕ್ಷ ಕೆ.ಟಿ.ಶಿವಕುಮಾರ್, ಪದಾಧಿಕಾರಿಗಳಾದ ರತ್ನಮ್ಮ, ಗೋಪಿನಾಥ್, ಮಹಮದ್ ರಫಿ, ಸುರೇಶ್, ಅಖಿಲೇಶ್, ಹರ್ಷ, ಹರೀಶ್‌ಕುಮಾರ್ ಇತರರಿದ್ದರು.