ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ

Yuvasene
Published on

ಚಿತ್ರದುರ್ಗ: ಆಹಾರ ಇಲಾಖೆ ಅಧಿಕಾರಿಗಳಿಂದ ವಿವಿಧ ರೀತಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಮಾದಿಗ ಯುವಸೇನೆ ಜಿಲ್ಲಾ ಸಮಿತಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲಾಖೆಯ ಜಂಟಿ ನಿರ್ದೇಶಕ, ಕಚೇರಿ ವ್ಯವಸ್ಥಾಪಕಿ ಗಮನಕ್ಕೆ ತಂದರು ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕೂಡಲೇ ಇಬ್ಬರನ್ನೂ ಅಮಾನತುಗೊಳಿಸಿ ಎಂದು ಸಿಎಂಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಆಹಾರ ಧಾನ್ಯಗಳು ಕಾಳಸಂಜೆಯಲ್ಲಿ ಮಾರಾಟವಾಗುತ್ತಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆ. ಅನೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಗುಣಮಟ್ಟದ ಅಕ್ಕಿ, ರಾಗಿ ವಿತರಿಸುತ್ತಿಲ್ಲ. ಎಲ್ಲಿಯೂ ಕ್ರಮವಹಿಸಿಲ್ಲ ಎಂದು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಕೋರಿದರು.

ಯುವಸೇನೆ ಜಿಲ್ಲಾ ಅಧ್ಯಕ್ಷ ಓ.ರಾಜಪ್ಪ, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ, ಮರಿಕುಂಟೆ ಮಹಲಿಂಗಪ್ಪ, ಅಂಜುಮ್, ಕೆ.ಎಸ್.ರೇಣುಕಾ, ಶಶಿಕುಮಾರ, ಶಂಕರಪ್ಪ, ಸೀಮಾ ಕೌಸರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net