ಅಧಿಕಾರಿಗಳ ದಾಳಿ, ಸಿಲಿಂಡರ್ ವಶಕ್ಕೆ

19Manju8
ಬೆಳಗಾವಿ ಜಿಲ್ಲೆಯಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಅಡುಗೆ ಸಿಲಿಂಡರ್‌ಗಳನ್ನು ಆಹಾರ ಇಲಾಖೆ ಅಧಿಕಾರಿ, ಸಿಬ್ಬಂದಿ ಜಪ್ತಿ ಮಾಡಿಕೊಂಡಿದ್ದಾರೆ.
Published on

ಬೆಳಗಾವಿ: ಜಿಲ್ಲೆಯಲ್ಲಿ ಗೃಹೋಪಯೋಗಿ ಅಡುಗೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಉಪಯೋಗಿಸುತ್ತಿದ್ದ ಹೋಟೆಲ್, ದಾಬಾ ಹಾಗೂ ರೆಸ್ಟೋರೆಂಟ್‌ಮೇಲೆ ಸೋಮವಾರ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 13 ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹೋಟೆಲ್, ದಾಬಾ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಅಕ್ರಮವಾಗಿ ಗೃಹೋಪಯೋಗಿ ಸಿಲಿಂಡರ್ ಬಳಕೆ ಮಾಡುತ್ತಿರುವ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿ 13 ಸಿಲಿಂಡರ್ ಮತ್ತು ಅವಶ್ಯಕ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಹೋಟೆಲ್‌ಗಳ ಮಾಲೀಕರ ಮೇಲೆ ಕ್ರಮ ವಹಿಸಲಾಗಿದೆ.

ಪಡಿತರ ಅಕ್ಕಿ ವಶಕ್ಕೆ: ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ 50 ಕ್ವಿಂಟಾಲ್‌ಗೂ ಅಧಿಕ ಅಕ್ಕಿ ಮತ್ತು ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net