ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೇರಲು ಪೈಪೋಟಿ

22222
Published on


ರಾಜ್ಯ ನಗರಾಭಿವೃದ್ಧಿ ಇಲಾಖೆಯಿಂದ ಮೀಸಲಾತಿ ಪ್ರಕಟ, ಗರಿಗೆದರಿದ ರಾಜಕೀಯ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಮೂರು ನಗರಸಭೆ, ಎರಡು ಪುರಸಭೆ ಹಾಗೂ ಒಂದು ಪಟ್ಟಣ ಪಂಚಾಯಿತಿ ಇದ್ದು, ಸ್ಥಳೀಯ ಆಡಳಿತದ ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆ ಮೀಸಲಾತಿ ಪ್ರಕಟವಾದ ಹಿನ್ನೆಲೆಯಲ್ಲಿ ಅಧಿಕಾರ ಹಿಡಿಯಲು ಕಸರತ್ತು ಶುರುವಾಗಿದೆ.
ರಾಜ್ಯ ನಗರಾಭಿವೃದ್ಧಿ ಇಲಾಖೆ ವಿವಿಧ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಸೋಮವಾರ ಪ್ರಕಟಿಸಿದೆ. ನೆಲಮಂಗಲ, ಹೊಸಕೋಟೆ ಹಾಗೂ ದೊಡ್ಡಬಳ್ಳಾಪುರ ನಗರಸಭೆ, ದೇವನಹಳ್ಳಿ, ಆನೇಕಲ್ ಹಾಗೂ ವಿಜಯಪುರ ಪುರಸಭೆಗೂ ಮೀಸಲಾತಿ ಪ್ರಕಟವಾಗಿದೆ. ಇದರ ಜತೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇಲ್ದರ್ಜೆಗೇರಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೂ ಮೀಸಲಾತಿ ಪ್ರಕಟವಾಗಿದೆಯಾರೂ ಚುನಾಯಿತ ಸದಸ್ಯರು ಇಲ್ಲದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸದ್ಯಕ್ಕಿಲ್ಲವಾಗಿದೆ. ಕೆಲವು ಸ್ಥಳೀಯ ಆಡಳಿತದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ಕೈದು ಮಂದಿ ಪ್ರಬಲ ಆಕಾಂಕ್ಷಿಗಳಿದ್ದಾರೆ. ಕೆಲವು ಆಡಳಿತದಲ್ಲಿ ಮೈತ್ರಿ ಇರುವುದರಿಂದ ವರಿಷ್ಠರ ಆದೇಶಕ್ಕೆ ಎದುರು ನೋಡಲಾಗುತ್ತಿದೆ.


ಕಾಂಗ್ರೆಸ್ ಪ್ರಾಬಲ್ಯ: ಜಿಲ್ಲೆಯ ನಾಲ್ಕೂ ತಾಲೂಕುಗಳ ಪೈಕಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಶಾಸಕರು ಹೊರತುಪಡಿಸಿ ಉಳಿದ ಮೂರು ತಾಲೂಕುಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು, ಜಿಲ್ಲೆಯ ಸ್ಥಳೀಯ ಆಡಳಿತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಉಳಿಸಿಕೊಂಡಿದೆ. ಆದರೆ ಇದರ ನಡುವೆ ರಾಜ್ಯಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇರುವುದರಿಂದ ಸ್ಥಳೀಯ ಆಡಳಿತದಲ್ಲೂ ಮೈತ್ರಿ ಪಕ್ಷಗಳ ೈಟ್ ಜೋರಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಬಿಜೆಪಿ ಶಾಸಕ ಧೀರಜ್‌ಮುನಿರಾಜು, ಬಿಜೆಪಿ ಹಾಗೂ ಜೆಡಿಎಸ್ ಮಾಜಿ ಶಾಸಕರು ಹಾಗೂ ಮೈತ್ರಿ ಪಕ್ಷದ ಮುಖಂಡರು ಬಿಜಿಯಾಗಿದ್ದಾರೆ. ಇದರ ನಡುವೆ ಕಾಂಗ್ರೆಸ್‌ನ ಜನಾಂದೋಲನದಲ್ಲಿ ಜಿಲ್ಲೆಯ ಮೂರು ತಾಲೂಕುಗಳ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ತೊಡಗಿಸಿಕೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯ ಆಡಳಿತದಲ್ಲಿ ಶಾಸಕರು ಯಾವ ಮಾನದಂಡ ಬಳಸುತ್ತಾರೆ ಎಂಬುದು ಕಾದುನೋಡಬೇಕಿದೆ.
ಬಾಶೆಟ್ಟಿಹಳ್ಳಿ ಪಪಂ ಮೀಸಲಾತಿ: ಗ್ರಾಮ ಪಂಚಾಯಿತಿಯಿಂದ ಮೇಲ್ದರ್ಜೆಗೆ ಏರಿದ ಬಳಿಕ ಇದೇ ಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಚುನಾವಣೆ ಎದುರಿಸುತ್ತಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನವು ಎಸ್‌ಟಿಗೆ ಮತ್ತು ಉಪಾಧ್ಯಕ್ಷ ಸ್ಥಾನವು ಬಿಸಿಎ ವರ್ಗಕ್ಕೆ ಮೀಸಲಾಗಿದೆ. ಒಟ್ಟು 19 ವಾರ್ಡ್‌ಗಳನ್ನೊಳಗೊಂಡಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿ ಬಾಕಿ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net