ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಮದ್ದೂರು ತಾಲೂಕಿನ ತೈಲೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಪ್ರಸನ್ನ ಹಾಗೂ ಉಪಾಧ್ಯಕ್ಷರಾಗಿ ಸರಸಮ್ಮ ಅವರು ಅವಿರೋಧವಾಗಿ ಶನಿವಾರ ಆಯ್ಕೆಯಾದರು. ಚಲುವರಾಜು, ರಘು, ನಾಗೇಶ್, ಅಣ್ಣಯ್ಯ ಇದ್ದರು.
02M.D.R.3
Published on

ಮದ್ದೂರು: ತಾಲೂಕಿನ ತೈಲೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಪ್ರಸನ್ನ ಹಾಗೂ ಉಪಾಧ್ಯಕ್ಷರಾಗಿ ಸರಸಮ್ಮ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾದರು.


ತೆರವಾಗಿದ್ದ ಎರಡೂ ಸ್ಥಾನಗಳಿಗೆ ಸಂಘದ ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಇವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇವರ ಆಯ್ಕೆಯನ್ನು ಚುನಾವಣಾ ಅಧಿಕಾರ ಡಿ.ಆಶಾ ಘೋಷಿಸಿದರು.


ತಾಪಂ ಮಾಜಿ ಸದಸ್ಯ ಚೆಲುವರಾಜು, ಮುಖಂಡರಾದ ಟಿ.ಸಿ.ರಘು, ನಾಗೇಶ್, ಅಣ್ಣಯ್ಯ, ರಾಮಲಿಂಗಯ್ಯ ಹಾಗೂ ಸಂಘದ ನಿರ್ದೇಶಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net