ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಪಕ್ಷದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಣೆ

H. SURESH- press meet (9) (1)
Published on

ಹಾಸನ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಆಲೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಪಕ್ಷದ ಎಲ್ಲ ಮುಖಂಡರಿಗೂ ಎಚ್. ಸುರೇಶ್ ಧನ್ಯವಾದ ಅರ್ಪಿಸಿದರು.

ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಜೇಶ್ ಲಿಲೋತಿಯಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಮುರಳಿ ಮೋಹನ್ ಸೇರಿದಂತೆ ಪಕ್ಷದ ಎಲ್ಲ ಮುಖಂಡರ ಶಿಫಾರಸ್ಸಿನ ಮೇಲೆ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಹಾಸನ ಜಿಲ್ಲಾಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಲು ಅನುಮೋದನೆಯೊಂದಿಗೆ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅವರೆಲ್ಲರೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನನ್ನನ್ನು ಆಲೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಉನ್ನತ ಹುದ್ದೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ನೀತಿ, ನಿಯಮ ಮತ್ತು ಪಕ್ಷದ ಸಿದ್ಧಾಂತಗಳಿಗೆ ಬದ್ದರಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕಾರ್ಯೋನ್ಮುಕರಾಗಿ ಕೆಲಸಗಳನ್ನು ಮಾಡಬೇಕೆಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ನಾನು ಜನಪರ ಕೆಲಸವನ್ನು ಮಾಡುತ್ತಾ ಬಂದಿದ್ದೇನೆ. ಮುಂದೆಯೂ ನನ್ನ ಸೇವೆಯನ್ನು ಜನಗಳಿಗೆ ತಲುಪಿಸುತ್ತೇನೆ. ಯಾವುದೇ ಸಮಸ್ಯೆಗಳಿದ್ದರೂ ಸ್ವತಃ ಜತೆಯಲ್ಲಿ ನಿಂತು ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಅಜ್ಜನಹಳ್ಳಿ ರಂಗಯ್ಯ, ಎಸ್‌ಸಿ, ಎಸ್‌ಟಿ ಆಲೂರು ತಾಲೂಕು ಮಾಜಿ ಅಧ್ಯಕ್ಷ ಹೊನ್ನಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಧರ್ಮಣ್ಣ, ಹಿಂದುಳಿದ ವರ್ಗದ ಅಧ್ಯಕ್ಷ ರಾಜಶೇಖರ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net